ಶನಿವಾರ, 30 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರಷ್ಟಾಚಾರದ ತನಿಖೆಗೆ ವಿಚಾರಣಾ ಆಯೋಗ ರಚನೆ: ಪ್ರಲ್ಹಾದ ಜೋಶಿ ಟೀಕೆ

Published 27 ಆಗಸ್ಟ್ 2023, 18:15 IST
Last Updated 27 ಆಗಸ್ಟ್ 2023, 18:15 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಯಾವುದೇ ಹಗರಣದ ತನಿಖೆ ಮಾಡಲಿ. ಅದಕ್ಕೆ ನಮ್ಮ ಅಭ್ಯಂತರ ಇಲ್ಲ. ಆದರೆ, ದಿನ ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಯ್ಯುತ್ತಿರುವ ನಿವೃತ್ತ ನ್ಯಾಯಮೂರ್ತಿ ಅವರಿಂದ ತನಿಖೆ ಮಾಡಿಸಲು ಹೊರಟಿರುವ ರಾಜ್ಯ ಸರ್ಕಾರದ ನಿಯತ್ತು ಏನು ಎನ್ನುವುದನ್ನು ತೋರಿಸುತ್ತದೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದರು.

ಬಿಜೆಪಿ ಸರ್ಕಾರದ ಭ್ರಷ್ಟಾಚಾರಗಳ ತನಿಖೆಗೆ ರಾಜ್ಯ ಸರ್ಕಾರ ನೇಮಿಸಿರುವ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ವಿಚಾರಣಾ ಆಯೋಗದ ಬಗ್ಗೆ ಭಾನುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

‘ನ್ಯಾಯಮೂರ್ತಿಯವರು ನಿವೃತ್ತರಾದ ನಂತರ ಮೋದಿ, ಬಿಜೆಪಿಯನ್ನು ಪ್ರತಿದಿನ ಟೀಕಿಸುತ್ತಿದ್ದಾರೆ. ಅವರೊಬ್ಬ ರಾಜಕಾರಣಿಯಾಗಿದ್ದಾರೆ. ರಾಜ್ಯ ಸರ್ಕಾರ ಉದ್ದೇಶಪೂರ್ವಕವಾಗಿಯೇ ಬಿಜೆಪಿ ವಿರೋಧಿ ನ್ಯಾಯಮೂರ್ತಿ ಅವರನ್ನು ತನಿಖಾ ಆಯೋಗದ ಅಧ್ಯಕ್ಷರನ್ನಾಗಿ ಮಾಡಿದೆ’ ಎಂದು ಕಿಡಿಕಾರಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT