ಶುಕ್ರವಾರ, ಸೆಪ್ಟೆಂಬರ್ 17, 2021
30 °C

ಯಡಿಯೂರಪ್ಪ, ಶೆಟ್ಟರ್ ಅನುಭವ ಪಕ್ಷ ಬಳಸಿಕೊಳ್ಳಲಿದೆ: ಪ್ರಲ್ಹಾದ ಜೋಶಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani Photo

ಹುಬ್ಬಳ್ಳಿ: ಹಿರಿಯರಾದ ಬಿ.ಎಸ್. ಯಡಿಯೂರಪ್ಪ ಹಾಗೂ ಜಗದೀಶ ಶೆಟ್ಟರ್ ಅವರ ರಾಜಕೀಯ ಅನುಭವವನ್ನು‌ ಮುಂಬರುವ ದಿನಗಳಲ್ಲಿ  ಪಕ್ಷ ಸಮರ್ಪಕವಾಗಿ ಬಳಸಿಕೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಮಹಾನಗರ ಪಾಲಿಕೆ ಚುನಾವಣೆಗೆ ಕುಟುಂಬ ಸಮೇತ ಬಂದು ಮತ ಚಲಾಯಿಸಿ ಮಾಧ್ಯಮದವರ ಜೊತೆ ‌ಮಾತನಾಡಿದ ಅವರು ಪಕ್ಷದಲ್ಲಿ ಯಾವ ಹಿರಿಯರನ್ನೂ ಕಡೆಗಣಿಸಿಲ್ಲ. ಕೋವಿಡ್ ಕಾರಣಕ್ಕೆ ಕೋರ್ ಕಮಿಟಿ ಸಭೆ ನಡೆದಿಲ್ಲ. ಮುಂದಿನ ದಿನಗಳಲ್ಲಿ ಸಭೆ ನಡೆಸಿ ಹಿರಿಯರ ಸಲಹೆ ಪಡೆದೇ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಒಂದು ತಿಂಗಳಲ್ಲಿ ಉತ್ತಮ ಆಡಳಿತ ನೀಡಿದ್ದಾರೆ. ಮುಖ್ಯಮಂತ್ರಿಯಾಗಿ ಯಾರು ಇರುತ್ತಾರೊ‌ ಅವರ ನೇತೃತ್ವದಲ್ಲಿಯೇ ಮುಂದಿನ‌ ಚುನಾವಣೆ ಎದುರಿಸುವುದು ಸಾಮಾನ್ಯ. ಅಮಿತ್ ಶಾ ಅವರು ಇದೇ ಮಾತು ಹೇಳಿದ್ದಾರೆ. ಇದರಲ್ಲಿ ‌ವಿಶೇಷವೇನೂ ಇಲ್ಲ ಎಂದರು.

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ   ಗೊಂದಲವಾದ ಬಗ್ಗೆ ಪೂರ್ಣ ಮಾಹಿತಿ ಇಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆಯಲಾಗುವುದು ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು