ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಲಾಲ್ ಪ್ರಮಾಣಪತ್ರ ರದ್ದುಗೊಳಿಸಲು ಮುತಾಲಿಕ್ ಆಗ್ರಹ

Last Updated 29 ಅಕ್ಟೋಬರ್ 2021, 8:58 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಭಾರತದ ಆರ್ಥಿಕತೆಗೆ ಮಾರಕವಾಗಿರುವ 'ಹಲಾಲ್ ಪ್ರಮಾಣ ಪತ್ರ'ವನ್ನು ಕೇಂದ್ರ ಸರ್ಕಾರ ರದ್ದುಪಡಿಸಬೇಕು. ಈ ಬಾರಿ 'ಹಲಾಲ್ ಮುಕ್ತ ದೀಪಾವಳಿ' ಅಭಿಯಾನ ಆರಂಭಿಸಲಾಗುವುದು ಎಂದು ಶ್ರೀ ರಾಮ ಸೇನಾ ಮುಖ್ಯಸ್ಥ ಪ್ರಮೋದ ಮುತಾಲಿಕ್ ಹಾಗೂ ಹಿಂದು ಜನಜಾಗೃತಿ ಸಮಿತಿ ರಾಷ್ಟ್ರೀಯ ವಕ್ತಾರ ರಮೇಶ ಶಿಂಧೆ ಜಂಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಭಾರತ ಸರ್ಕಾರ ನೀಡುವ ಎಫ್ಎಸ್ಎಸ್ಎಐ ಪ್ರಮಾಣ ಪತ್ರಕ್ಕೆ ಪರ್ಯಾಯವಾಗಿ, ಮುಸ್ಲಿಂ ಸಂಸ್ಥೆಯೊಂದು ಮಾಂಸಾಹಾರ, ಚಾಕೊಲೇಟ್ ಸೇರಿದಂತೆ ಹಲವು ಉತ್ಪನ್ನಗಳಿಗೆ ಹಲಾಲ್ ಪ್ರಮಾಣ ಪತ್ರ ನೀಡುತ್ತಿದೆ. ಇದಕ್ಕಾಗಿ ಒಂದು ವಸ್ತುವಿಗೆ ವರ್ಷಕ್ಕೆ ₹ 21,500 ಪಡೆಯಲಾಗುತ್ತಿದೆ. ಆ ಮೂಲಕ ಕೋಟ್ಯಂತರ ರೂಪಾಯಿ ಹಣ ಗಳಿಸುತ್ತಿದೆ‌‌. ಈ ಹಣ ದೇಶ ವಿರೋಧಿ ಚಟುವಟಿಕೆಗಳಿಗೆ ಬಳಕೆಯಾಗುತ್ತಿದೆ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT