ಹುಬ್ಬಳ್ಳಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಜನಪ್ರಿಯತೆ ಸಹಿಸದ ಬಿಜೆಪಿಯವರು, ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಷಡ್ಯಂತ್ರ ರೂಪಿಸಿದ್ದಾರೆ. ಇದು ಫಲಿಸುವುದಿಲ್ಲ’ ಎಂದು ಶಾಸಕ ಪ್ರಸಾದ ಅಬ್ಬಯ್ಯ ತಿಳಿಸಿದ್ದಾರೆ.

‘ಕೇಂದ್ರದ ಬಿಜೆಪಿ ಸರ್ಕಾರವು ವಿವಿಧ ರಾಜ್ಯಗಳಲ್ಲಿ ಆಡಳಿತ ಪಕ್ಷವನ್ನು ಕುತಂತ್ರದಿಂದ ಕೆಡವಿ, ಹಿಂಬಾಗಿಲಿನಿಂದ ತಮ್ಮ ಸರ್ಕಾರ ರಚಿಸಿದೆ. ರಾಜ್ಯದಲ್ಲೂ ಕಾಂಗ್ರೆಸ್ ಸರ್ಕಾರ ಪತನ ಮಾಡಲು ಷಡ್ಯಂತ್ರ ಮಾಡುತ್ತಿದೆ. ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಸಿಬಿಐ, ಐಟಿ, ಇಡಿಯನ್ನು ಏಜೆಂಟರಂತೆ ಬಳಸಿಕೊಳ್ಳುತ್ತಿದೆ’ ಎಂದು ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.

‘ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಲಾಗಿದ್ದು, ನಾವೂ ಕಾನೂನು ಹೋರಾಟ ಮಾಡುತ್ತೇವೆ. ಸಿದ್ದರಾಮಯ್ಯ ಆರೋಪ ಮುಕ್ತರಾಗುತ್ತಾರೆ. ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.