ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಐತಿಹಾಸಿಕ ದಾಖಲೆ ರಕ್ಷಣೆ ಎಲ್ಲರ ಕರ್ತವ್ಯ: ಅಜಿತ ಪ್ರಸಾದ

Published 9 ಜನವರಿ 2024, 15:42 IST
Last Updated 9 ಜನವರಿ 2024, 15:42 IST
ಅಕ್ಷರ ಗಾತ್ರ

ಧಾರವಾಡ: ಐತಿಹಾಸಿಕ ದಾಖಲೆಗಳ ಸಂಗ್ರಹ ಮತ್ತು ಸಂರಕ್ಷಣೆ ಎಲ್ಲರ ಕರ್ತವ್ಯ. ಐತಿಹಾಸಿಕ ಘಟನೆಗಳನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದು ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಅಜಿತ ಪ್ರಸಾದ ಹೇಳಿದರು.

ನಗರದ ಜೆ.ಎಸ್.ಎಸ್ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆ, ಪ್ರಾದೇಶಿಕ ಪತ್ರಗಾರ ಇಲಾಖೆಯ ವತಿಯಿಂದ ಸೋಮವಾರ ಆಯೋಜಿಸಿದ್ದ ಪತ್ರಗಾರ ಕೂಟ ಮತ್ತು ಉಪನ್ಯಾಸ ಮಾಲೆ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಐತಿಹಾಸಿಕ ದಾಖಲೆಗಳು ಅಮೂಲ್ಯ ಮಾಹಿತಿಯನ್ನು ನೀಡುತ್ತವೆ. ವಿಷಯದ ಪರಿಪೂರ್ಣ ಚರಿತ್ರೆಯನ್ನು ಕಟ್ಟುವಲ್ಲಿ ಮತ್ತು ಅಧ್ಯಯನ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದರು.

ವಿದ್ಯಾರ್ಥಿಗಳು ತಾಳೆ ಗರಿ, ದಾಖಲೆ ಪತ್ರ ಮುಂತಾದವುಗಳನ್ನು ಸಂರಕ್ಷಿಸಬೇಕು. ಅವುಗಳನ್ನು ಅಧ್ಯಯನ ಮಾಡಬೇಕು ಎಂದು ಸಲಹೆ ನೀಡಿದರು. 

ಇತಿಹಾಸ ತಜ್ಞ ಪ್ರೊ.ಸಿ.ಎಸ್. ಹಸಬಿ ಹಾಗೂ ಜಗದೀಶ ಕಿವುಡನ್ನವರ ಉಪನ್ಯಾಸ ನೀಡಿದರು. ಪ್ರೊ.ಮಹಾಂತ ದೇಸಾಯಿ,ಪ್ರೊ.ಜಿ. ಕುಂಬಾರ, ಮಹಾವೀರ ಉಪಾಧ್ಯೆ, ಮಹಾಂತೇಶ ರವಾಟಿ, ವೈಶಾಲಿ ಕುಂದಗೋಳ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT