ಶುಕ್ರವಾರ, ಡಿಸೆಂಬರ್ 9, 2022
22 °C

ಐಐಐಟಿ ಧಾರವಾಡ ಉದ್ಘಾಟನೆಗೆ ಆಗಮಿಸಿದ ರಾಷ್ಟ್ರಪತಿ: ಬರಮಾಡಿಕೊಂಡ ಸುಧಾ ಮೂರ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರವಾಡ: ಇಲ್ಲಿನ ತಡಸಿನಕೊಪ್ಪದಲ್ಲಿ ನಿರ್ಮಾಣಗೊಂಡಿರುವ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ) ಉದ್ಘಾಟನೆಗೆ ಆಗಮಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಂಸ್ಥೆಯ ಅಧ್ಯಕ್ಷೆ ಸುಧಾ ಮೂರ್ತಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ ಗೆಹಲೋತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಇದ್ದರು. 

ರಾಷ್ಟ್ರಪತಿ ಅವರಿಗೆ ಐಐಐಟಿ ಕ್ಯಾಂಪಸ್‌ನಲ್ಲಿ ಗ್ರೀನ್ ರೂಮ್ ಸ್ಥಾಪಿಸಲಾಗಿದ್ದು, ಅವರಿಗಾಗಿ ವಿಶೇಷ ಊಟದ ವ್ಯವಸ್ಥೆ ಮಾಡಲಾಗಿದೆ. ಉತ್ತರ ಕರ್ನಾಟಕ ಶೈಲಿಯ ಸಾಂಪ್ರದಾಯಿಕ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು.

ಉದ್ಘಾಟನಾ ಕಾರ್ಯಕ್ರಮ ನಡೆಯಲಿರುವ ಸಭಾಂಗಣದಲ್ಲಿ 700 ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು, ಅಧಿಕಾರಿಗಳು, ಆಹ್ವಾನಿತ ಗಣ್ಯರು, ಭಾರತೀಯ ತಾಂತ್ರಜ್ಞಾನ ಸಂಸ್ಥೆ (ಐಐಟಿ) ಅಧಿಕಾರಿಗಳು ಇದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು