ಧಾರವಾಡ: ‘ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಜುಲೈ 21 ರಂದು ನವಲಗುಂದ ಚಲೋ ಹಮ್ಮಿಕೊಳ್ಳಲಾಗಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಮುಖಂಡ ಈರಣ್ಣ ಬಳಿಗೇರ ಕೋರಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಕಳಸಾ-ಬಂಡೂರಿ ಯೋಜನೆ ಅನುಷ್ಠಾನ ವಿಚಾರಣೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರಾಜಕೀಯ ಮಾಡಬಾರದು. ಕೇಂದ್ರ ಹಾಗೂ ರಾಜ್ಯ ಒಟ್ಟಿಗೆ ಸೇರಿ ಕಾನೂನು ತೊಡಕು ನಿವಾರಿಸಿ ಶೀಘ್ರ ಕಾಮಗಾರಿ ಪ್ರಾರಂಭಿಸಲು ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದರು.

‘ರೈತರ ಬೆಳೆಸಾಲ ಮತ್ತು ಸ್ತ್ರೀ ಸ್ವ-ಸಹಾಯ ಸಂಘಗಳ ಸಾಲಮನ್ನಾ ಮಾಡಬೇಕು. ಆಶಾ ಮತ್ತು ಬಿಸಿಯೂಟ ಕಾರ್ಯಕರ್ತರನ್ನು ಕಾಯಂಗೊಳಿಸಬೇಕು. ಬೆಳೆ ಪರಿಹಾರ ಬಿಡುಗಡೆಗೊಳಿಸಬೇಕು’ ಎಂದು ಆಗ್ರಹಿಸಿದರು.

ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ನಾಗಪ್ಪ ಉಂಡಿ ಮಾತನಾಡಿ, ‘ರೈತ ಹುತಾತ್ಮ ದಿನಾಚರಣೆಯಲ್ಲಿ ಮೇಲುಕೋಟೆ ಶಾಸಕ ದರ್ಶನ ಪುಟ್ಟಣ್ಣಯ್ಯ, ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ, ಚಾಮರಾಜ ಮಾಲಿಪಾಟೀಲ ಪಾಲ್ಗೊಳ್ಳುವರು’ ಎಂದರು.

‘ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರ ಕೊರತೆಯಾಗಿದೆ. ಮಕ್ಕೆಜೋಳ, ಸೊಯಾಬೀನ್, ಹತ್ತಿ, ಕಬ್ಬು ಬೆಳೆಗಳಿಗೆ ಯೂರಿಯಾ ಅಗತ್ಯವಿದೆ. ಕೆಲವಡೆ ಕೃತಕ ಅಭಾವ ಸೃಷ್ಟಿಸಿ, ದುಪ್ಪಟ್ಟು ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಕೆಲವರು ಕಾಳಸಂತೆಯಲ್ಲಿ ಗೊಬ್ಬರ ಮಾರಾಟ ಮಾಡುತ್ತಿದ್ದಾರೆ ಯೂರಿಯಾ ವಿತರಣೆಗೆ ಸರ್ಕಾರ ಕ್ರಮವಹಿಸಬೇಕು’ ಎಂದರು.

ರೈತ ಮುಖಂಡ ರವಿರಾಜ ಕಾಂಬಳೆ ಮಾತನಾಡಿ, ‘ರೈತ ಮಹಿಳೆಯರ ಸಾಲ ಮನ್ನಾ ಮಾಡಬೇಕು. ಮೈಕ್ರೊ ಫೈನಾನ್ಸ್ ಕಂಪನಿ ಸಿಬ್ಬಂದಿ ಸಾಲ ಮರುಪಾವತಿಗೆ ಕಿರುಕುಳ ನೀಡುತ್ತಾರೆ. ಇದರಿಂದ ರೈತರು, ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಇದನ್ನು ತಡೆಗಟ್ಟಬೇಕು’ ಎಂದರು.

‘ಕಳಸಾ– ಬಂಡೂರಿ ಹೋರಾಟಗಾರರ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಕೂಡಲೇ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.

ಚಿದಾನಂದ ಬೈರಪ್ಪನವರ, ರವಿ ವಡ್ಡರ, ಯಲ್ಲಪ್ಪ ಕಡಚಗಟ್ಟಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.