ಧಾರವಾಡ: ಹುಬ್ಬಳ್ಳಿಯ ವಿಮಾನ ನಿಲ್ದಾಣವನ್ನು ಅಂತರರಾಷ್ಟ್ರೀಯ ನಿಲ್ದಾಣವಾಗಿಸಲು ಕ್ರಮ ವಹಿಸಬೇಕು ಎಂದು ಬಿಜೆಪಿ ಮುಖಂಡ ಪಿ.ಎಚ್.ನೀರಲಕೇರಿ ಒತ್ತಾಯಿಸಿದ್ದಾರೆ.
ಸುಸಜ್ಜಿತ ದೇಶೀಯ ಈ ನಿಲ್ದಾಣ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗಲು ಎಲ್ಲ ಅರ್ಹತೆ ಇದೆ. ಈ ನಿಲ್ದಾಣಕ್ಕೆ ಭೂಸ್ವಾಧೀನ ಮಾಡಿಕೊಳ್ಳುವ ಸಂದರ್ಭದಲ್ಲಿಯೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಹೇಳಲಾಗಿತ್ತು. ಆದರೆ, ಆ ಭರವಸೆ ಈಡೇರಿಲ್ಲ ಎಂದು ತಿಳಿಸಿದ್ದಾರೆ.
ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗಿಸಿದರೆ ಈ ಭಾಗದ ಅಭಿವೃದ್ಧಿ ವೇಗವಾಗಲಿದೆ. ಉತ್ತರ ಕರ್ನಾಟಕದವರೇ ಆದ ಸಚಿವ ಎಂ.ಬಿ.ಪಾಟೀಲ ಈ ನಿಟ್ಟಿನಲ್ಲಿ ಗಮನಹರಿಸಬೇಕು. ಕ್ರಮ ವಹಿಸದಿದ್ದರೆ ಈ ಭಾಗದ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.