ನವಲಗುಂದ: ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ತಾಲ್ಲೂಕು ಘಟಕದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಪದಗ್ರಹಣ ಸಮಾರಂಭ ಹಾಗೂ 2ಎ ಮೀಸಲಾತಿಗಾಗಿ ಹಕ್ಕೊತ್ತಾಯಿಸಿ ಪತ್ರ ಚಳವಳಿಯನ್ನು ಸೆ.18ರಂದು ಬುಧವಾರ ಬೆಳಿಗ್ಗೆ 11ಕ್ಕೆ ಪಟ್ಟಣದ ಹೊರವಲಯದಲ್ಲಿರುವ ವೀರಶೈವ ಲಿಂಗಾಯತ ಸಮುದಾಯ ಭವನದಲ್ಲಿ ಹಮ್ದಿಕೊಳ್ಳಲಾಗಿದೆ ಎಂದು ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಶಂಕರಗೌಡ ಬಾಳನಗೌಡ್ರ ಹೇಳಿದರು.

ಅವರು ಭಾನುವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮದ ಸಾನಿಧ್ಯವನ್ನು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ವಹಿಸುವರು. ಸಮಾಜದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಉದ್ಘಾಟಿಸುವರು, ಮಾಜಿ ಶಾಸಕ ಡಾ.ಆರ್.ಬಿ.ಶಿರಿಯಣ್ಣವರ ಅಧ್ಯಕ್ಷತೆ ವಹಿಸುವರು

ಶಾಸಕ ಎಂ.ಆರ್.ಪಾಟೀಲ, ಮಾಜಿ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಮೋಹನ ಲಿಂಬಿಕಾಯಿ, ಧಾರವಾಡ ಹಾಲು ಒಕ್ಕೂಟ ನಿರ್ದೇಶಕಿ ಶಿವಲೀಲಾ ಕುಲಕರ್ಣಿ, ಸಮಾಜದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ವೀಣಾ ವಿಜಯಾನಂದ ಕಾಶಪ್ಪನವರ, ಹೋರಾಟ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಬಾಪುಗೌಡ ಪಾಟೀಲ, ನಗರ ಅಧ್ಯಕ್ಷ ಸುರೇಶ ಕಮ್ಮಾರ, ನಿಂಗಣ್ಣ ಕರೀಕಟ್ಟಿ, ಅಡಿವೆಪ್ಪ ಮನಮಿ, ವಿಜಯಲಕ್ಷ್ಮೀ ಪಾಟೀಲ, ಶಾಂತಾದೇವಿ ನಿಡವಣಿ, ಸದುಗೌಡ ಪಾಟೀಲ, ನಾಗಪ್ಪ ಸಂಕದ, ಗುರುಶಾಂತಗೌಡ ಪಾಟೀಲ, ಮಲ್ಲಿಕಾರ್ಜುನ ಹಿರೇಕೊಪ್ಪ ಇತರರು ಭಾಗವಹಿಸುವರು ಎಂದರು.

2ಎ ಮೀಸಲಾತಿ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ವಿಜಯ ಕುಲಕರ್ಣಿ, ನಾಗನಗೌಡ ಪಾಟೀಲ್, ಅಶೋಕ ಮರಕುಂಬಿ, ದ್ಯಾಮನಗೌಡ ಪಾಟೀಲ್, ಗೌರೀಶ ಕಮತರ, ಕೆ.ಬಿ.ಮದ್ನೂರ, ಸುರೇಶ ಕಮ್ಮಾರ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.