ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘11 ಕ್ಷೇತ್ರದಲ್ಲಿ ಪಿಜೆಪಿ ಸ್ಪರ್ಧೆ’

Published 13 ಏಪ್ರಿಲ್ 2024, 14:14 IST
Last Updated 13 ಏಪ್ರಿಲ್ 2024, 14:14 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಪ್ರಹಾರ ಜನಶಕ್ತಿ ಪಾರ್ಟಿಯಿಂದ ರಾಜ್ಯದ 11 ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದು, ಧಾರವಾಡ ಲೋಕಸಭಾ ಕ್ಷೇತ್ರದಿಂದ ಟಾಕಪ್ಪ ಕಲಾಲ ಅವರು ಸ್ಪರ್ಧೆ ಮಾಡಲಿದ್ದಾರೆ’ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಪ್ರವೀಣ ಚೌಧರಿ ಹೇಳಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಂಟು ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದ್ದು, ಇನ್ನೂ ಮೂರು ಕ್ಷೇತ್ರಗಳಾದ ರಾಯಚೂರ, ಕೊಪ್ಪಳ ಮತ್ತು ಹಾವೇರಿ ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ಶೀಘ್ರದಲ್ಲಿಯೇ ಘೋಷಣೆ ಮಾಡಲಾಗುವುದು’ ಎಂದು ತಿಳಿಸಿದರು.

‘ರಾಜ್ಯದ ಹಿಂದುಳಿದ ವರ್ಗಗಳ ಹಾಗೂ ಅಲೆಮಾರಿ ಸಮಾಜ ಸೇರಿದಂತೆ ಬಹುತೇಕ ಸಮುದಾಯದವರು ನಮಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಸಮಸ್ಯೆಗಳ ಬಗ್ಗೆ ನಮ್ಮ ಪಕ್ಷ ಸದಾ ಹೋರಾಟ ನಡೆಸುತ್ತ ಬಂದಿದೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ತಮ್ಮ ಅಭಿವೃದ್ಧಿ ಮಾಡಿಕೊಂಡಿವೆಯೇ ಹೊರತು, ಕ್ಷೇತ್ರದ ಅಭಿವೃದ್ಧಿ ಮಾಡಿಲ್ಲ’ ಎಂದು ಆರೋಪಿಸಿದರು.

ಧಾರವಾಡ ಲೋಕಸಭಾ ಅಭ್ಯರ್ಥಿ ಟಾಕಪ್ಪ ಕಲಾಲ, ರಾಜ್ಯ ಘಟಕದ ಉಪಾಧ್ಯಕ್ಷ ಶರಣಬಸವ ಹಿರೇಮಠ, ಪ್ರಧಾನ ಕಾರ್ಯದರ್ಶಿ ಮುಕ್ತಿಯಾರ ಖಾಜಿ, ಜಿಲ್ಲಾ ಗಟಕದ ಅಧ್ಯಕ್ಷ ಯಲ್ಲೇಶ ಅಳಗವಾಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT