ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಳಚರಂಡಿ, ರಸ್ತೆ ಅಭಿವೃದ್ಧಿಗೆ ಪ್ರಾಶಸ್ತ್ಯ: ಶಾಸಕ ಶೆಟ್ಟರ್

ಅರವಿಂದ ನಗರ ರಸ್ತೆ, ಒಳಚರಂಡಿ ವೀಕ್ಷಣೆ
Last Updated 20 ಜನವರಿ 2022, 16:51 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಸ್ಥಳೀಯ ರಸ್ತೆಗಳು ಹಾಗೂ ಒಳಚರಂಡಿ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಉದ್ಯಾನದ ಸಮಸ್ಯೆಯನ್ನು ಬಗೆಹರಿಸಲಾಗುವುದು. ಸಾರ್ವಜನಿಕರು ಓಡಾಡಲು ಅನುಕೂಲವಾಗುವಂತೆ ಪಾದಚಾರಿ ಮಾರ್ಗವನ್ನು ನಿರ್ಮಿಸಲಾಗುವುದು’ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು.

ವಾರ್ಡ್ ನಂ. 42ರ ಅರವಿಂದ ನಗರದ ರಸ್ತೆ ಹಾಗೂ ಒಳಚರಂಡಿ ಸಮಸ್ಯೆಯನ್ನು ವೀಕ್ಷಿಸಿ ಮಾತನಾಡಿದ ಅವರು, ‘ಚನ್ನಪೇಟೆಯ ಚರಂಡಿ ಮಣ್ಣಿನಿಂದ ತುಂಬಿ ಹೋಗಿದೆ. ಇದರಿಂದಾಗಿ ಜನ ಬಹಳ ತೊಂದರೆ ಅನುಭವಿಸುತ್ತಿದ್ದಾರೆ. ಆದಷ್ಟು ಬೇಗ ಚರಂಡಿಯ ಹೂಳು ತೆಗೆಯಲು ಅಧಿಕಾರಿಗಳಿಗೆ ಸೂಚನೆ ನೀಡುವೆ’ ಎಂದು ಭರವಸೆ ನೀಡಿದರು.

‘ಜಲಮಂಡಳಿ ಹಾಗೂ ಸ್ಥಳೀಯ ಪಾಲಿಕೆ ಸದಸ್ಯರ ಜೊತೆ ಮಾತನಾಡಿ, ವಾರ್ಡ್‌ನ ಒಳರಸ್ತೆಗಳನ್ನು ಅಭಿವೃದ್ಧಿ ಮಾಡಲಾಗುವುದು. ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಚರಂಡಿಯನ್ನು ದುರಸ್ತಿ ಮಾಡಲಾಗುವುದು’ ಎಂದು ತಿಳಿಸಿದರು.

ವಾರ್ಡ್ ನಂ. 40ರ ಬ್ಯಾಂಕರ್ಸ್ ಕಾಲೊನಿಗೆ ಭೇಟಿ ನೀಡಿ, ನಗರೋತ್ಥಾನ ಯೋಜನೆಯಡಿ ನಡೆಯುತ್ತಿರುವ ರಸ್ತೆ ಕಾಮಗಾರಿ ವೀಕ್ಷಿಸಿದ ಶೆಟ್ಟರ್, ‘ಕಳಪೆ ಕಾಮಗಾರಿ ಕಂಡುಬಂದರೆ ಜನರು ಕೂಡಲೇ ಅಧಿಕಾರಿಗಳ ಗಮನಕ್ಕೆ ತರಬೇಕು. ಅಭಿವೃದ್ಧಿ ಕೆಲಸಗಳಿಗೆ ಸಮಸ್ಯೆಯಾಗದಂತೆ ಜನರೂ ಸಹಕರಿಸಬೇಕು. ರಸ್ತೆ ಅಗಲೀಕರಣದಿಂದ ಜನರಿಗೆ ಕೆಲವು ದಿನಗಳು ತೊಂದರೆ ಆಗಲಿದೆ‌. ಆದ್ದರಿಂದ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಲಾಗುವುದು’ ಎಂದರು.

ಹುಡಾ ಅಧ್ಯಕ್ಷ ನಾಗೇಶ ಕಲ್ಬುರ್ಗಿ, ಪಾಲಿಕೆ ಸದಸ್ಯ ಸಂತೋಷ ಚವ್ಹಾಣ, ಮುಖಂಡರಾದ ಡಿ.ಕೆ. ಚವ್ಹಾಣ, ವಿನಾಯಕ ಕುಲಕರ್ಣಿ, ಮಹೇಂದ್ರ ಕೌತಾಳ, ಮುಕುಂದ ಗುಗ್ಗರಿ, ಶಿವನಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT