ಸೋಮವಾರ, ಮೇ 23, 2022
24 °C

ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು: ಸಂಜೀವ್ ಕಿಶೋರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ‘ನೈರುತ್ಯ ರೈಲ್ವೆಯು ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿದೆ. 2021-22ರ ಅವಧಿಯಲ್ಲಿ 187 ಕಿ.ಮೀ. ದ್ವಿಪಥಿಕರಣ, 22 ಕಿ.ಮೀ. ಹೊಸ ಮಾರ್ಗಗಳು ಹಾಗೂ 511.7 ಕಿ.ಮೀ. ವಿದ್ಯುದ್ದೀಕರಣ ಪೂರ್ಣಗೊಳಿಸಲಾಗಿದೆ’ ಎಂದು ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್ ಹೇಳಿದರು.

ನಗರದಲ್ಲಿ ಶುಕ್ರವಾರ ಇಲಾಖೆಯ ಹುಬ್ಬಳ್ಳಿ, ಬೆಂಗಳೂರು, ಮೈಸೂರು ವಿಭಾಗಗಳ ಪ್ರಧಾನ ಮುಖ್ಯಸ್ಥರು ಹಾಗೂ ವಿಭಾಗೀಯ ರೈಲ್ವೆ ವ್ಯವಸ್ಥಾಪಕರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ನಿವ್ವಳ ಶೂನ್ಯ ಇಂಗಾಲದ ಹೊರಸೂಸುವಿಕೆಯನ್ನು ಸಾಧಿಸುವ ನಿಟ್ಟಿನಲ್ಲಿ, 2021-22ನೇ ಹಣಕಾಸು ವರ್ಷದಲ್ಲಿ 26 ರೈಲುಗಳ ಸಂಚಾರವನ್ನು ಎಲೆಕ್ಟ್ರಿಕ್ ಟ್ರಾಕ್ಷನ್‌ಗೆ ಪರಿವರ್ತಿಸಲಾಗಿದೆ’ ಎಂದರು.

‘ಡೀಸೆಲ್ ಬಳಕೆ ತಗ್ಗಿಸುವುದಕ್ಕಾಗಿ 40 ರೈಲುಗಳು ಎಚ್ಒಜಿ ಪವರ್ ಕಾರ್‌ಗಳಲ್ಲಿ ಸಂಚರಿಸುತ್ತಿವೆ. ಹಸಿರು ಅಭಿಯಾನದ ಉಪಕ್ರಮವಾಗಿ,  ವಿವಿಧ ಜಾತಿಯ 70 ಸಾವಿರ ಸಸಿಗಳನ್ನು ನೆಡಲಾಗಿದೆ. ಸರಕು ಸಾಗಾಟ, ಗುಜರಿ ವಸ್ತುಗಳ ಮಾರಾಟ ಸೇರಿದಂತೆ ವಿವಿಧ ಮೂಲಗಳಿಂದ ಬರುವ ಆದಾಯವು ಏರಿಕೆಯಾಗಿದೆ’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು