ಬುಧವಾರ, ಜನವರಿ 19, 2022
23 °C

ಹುಬ್ಬಳ್ಳಿ: ಖಾಸಗಿ ಬಸ್ -ಕಾರು ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ನಗರದ ಹೊರವಲಯದ ತಾರಿಹಾಳ ಬೈಪಾಸ್ ಬಳಿ ಖಾಸಗಿ ಬಸ್ ಮತ್ತು ಕಾರ್ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಹಳೇಹುಬ್ಬಳ್ಳಿ ನಿವಾಸಿ ಜಗದೀಶ ಶೆಟ್ಟಿ(36) ಮೃತಪಟ್ಟವರು. ಕಾರಿನಲ್ಲಿದ್ದ ಮೂವರು ಮಕ್ಕಳು ಮತ್ತು ಮಹಿಳೆ ಗಾಯಗೊಂಡಿದ್ದು, ಕಿಮ್ಸ್'ಗೆ ದಾಖಲಿಸಲಾಗಿದೆ.

ಮುಂಬೈನಿಂದ ಬೆಂಗಳೂರಿಗೆ ಹೊರಟಿದ್ದ ಶರ್ಮ ಟ್ರಾವೆಲ್ಸ್ ಬಸ್ ಮತ್ತು ಹುಬ್ಬಳ್ಳಿಯಿಂದ ಉಳವಿಗೆ ಹೊರಟಿದ್ದ ಕಾರ್ ನಡುವೆ ಡಿಕ್ಕಿಯಾಗಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್ ಮುಂಭಾಗ ಸಹ ಜಖಂ ಆಗಿದೆ. ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು