ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರ್ವಜನಿಕ  ಗಣೇಶೋತ್ಸವ ಸಮಿತಿಗಳ ಮಹಾಮಂಡಳದಿಂದ ಬಹುಮಾನ ವಿತರಣೆ

ಸಾಧಕರ ಗುರುತಿಸುವ ಪರಂಪರೆ ಮುಂದುವರಿಯಲಿ: ಸ್ವಾಮೀಜಿ
Last Updated 4 ಸೆಪ್ಟೆಂಬರ್ 2022, 9:06 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನಗರದ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಮಹಾಮಹಾಮಂಡಳವು ಸಮಾಜದಲ್ಲಿ ಸಮಾಜಮುಖಿ ಕಾರ್ಯಮಾಡುವ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯ ಮಾಡುತ್ತಿದ್ದು, ಈ ಧಾರ್ಮಿಕ ಪರಂಪರೆ ಮುಂದುವರಿಸಿಕೊಂಡು ಹೋಗಬೇಕು ಎಂದು ನಗರದ ಮೂರುಸಾವಿರ ಮಠದ ಜಗದ್ಗುರು ಗುರುಸಿದ್ಧರಾಜಯೋಗೀಂದ್ರ ಸ್ವಾಮೀಜಿ ಹೇಳಿದರು.

ನಗರದ ಮೂರು ಸಾವಿರ ಮಠದ ಮೂಜಗಂ ಸಭಾಭವನದಲ್ಲಿ ಹುಬ್ಬಳ್ಳಿ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಮಹಾಮಂಡಳವು ಭಾನುವಾರ ಹಮ್ಮಿಕೊಂಡಿದ್ದ ಬಹುಮಾನ ವಿತರಣೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು‌ ಮಾತನಾಡಿದರು.

ಮಹಾಮಹಾಮಂಡಳವು ಧಾರ್ಮಿಕ, ಸಾಮಾಜಿಕ ಕಾರ್ಯ ಮಾಡುತ್ತ ಬಂದಿದೆ. ಮಹಾಮಂಡಳದ ಪದಾಧಿಕಾರಿಗಳು ಇದಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವುದು ಶ್ಲಾಘನೀಯ. ಇಂತಹ ಕಾರ್ಯಗಳು ಮುಂದುವರಿಯಲಿ ಎಂದು ಸಲಹೆ ನೀಡಿದರು.

ಶಾಕಸ ಪ್ರಸಾದ ಅಬ್ಬಯ್ಯ ಮಾತನಾಡಿ, ಗಣೇಶ ಮಹಾಮಂಡಳದವರ ಸಮಾಜಮುಖಿ ಕಾರ್ಯಗಳಿಂದಾಗಿ ನಗರದಲ್ಲಿ ಆಚರಿಸುತ್ತಿರುವ ಗಣೇಶೋತ್ಸೋತ್ಸವು ರಾಜ್ಯವಲ್ಲದೇ ದೇಶಕ್ಕೆ ಮಾದರಿಯಾಗಿದೆ. ಪ್ರತಿಭಾವಂತರು, ಸಮಾಜ ಸೇವಕರನ್ನು ಗುರುತಿಸಿ ಅವರಿಗೆ ಪುರಸ್ಕಾರ ನೀಡಿ ಸನ್ಮಾನಿಸಿ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಎಂದರು.

ಬಹುಮಾನ: ಹು-ಧಾ ಬಂಟರ ಸಂಘದ ಅಧ್ಯಕ್ಷ ಸುಗ್ಗಿ ಸುಧಾಕರ ಶೆಟ್ಟಿ, ರೋಣದ ಪರಿಸರ ಬೆಳಿಸಿ, ಉಳಿಸಿ ಆಂದೋಲನದ ಮುತ್ತಣ್ಣ ತಿರ್ಲಾಪೂರ, ಫೋಟೋ ಮತ್ತು ವಿಡಿಯೋ ಗ್ರಾಫರ್ ಸಂಘದ ಅಧ್ಯಕ್ಷ ಕಿರಣ ಬಾಕಳೆ, ನೈರುತ್ಯ ರೈಲ್ವೆ ವಕ್೯ ಶಾಪ್ ಅಧ್ಯಕ್ಷ ಸೋಮನಾಥ ಕವಳೇಕರ, ಜ್ಯೋತಿಷ ತಜ್ಞ ನೀಲಕಂಠಶಾಸ್ತ್ರಿ ಹಿರೇಮಠ, ವಿ.ಇ. ಚಾರಖಾನಿ, ಪೊಲೀಸ್ ಕಾಸ್ಟೆಬಲ್ ಮಲ್ಲಿಕಾರ್ಜುನ ನಿಡವಣಿ, ಗೃಹ ರಕ್ಷದ ದಳದ ಕೃಷ್ಣಾ ಬ್ಯಾಡಗಿ, ಅಲ್ತಾಪ ಶೇಖಗೆ ಸೇರಿದಂತೆ ನಗರದ ವಿಜೇತ ಗಣೇಶೋತ್ಸವ ಮಂಡಳಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.

ಹಿರಿಯ ಪತ್ರಕರ್ತ ಗಣಪತಿ ಗಂಗೊಳ್ಳಿ, ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಲೋಚನೇಶ ಹೂಗಾರ, ಮಹಾಮಂಡಳದ ಅಧ್ಯಕ್ಷ ಮೋಹನ ಲಿಂಬಿಕಾಯಿ, ಸಿದ್ಧಾರೂಢ ಟ್ರಸ್ಟ ಕಮಿಟಿ ಅಧ್ಯಕ್ಷ ಧರಣೇಂದ್ರ ಜವಳಿ, ಮಹಾಮಂಡಳದ ಉಪಾಧ್ಯಕ್ಷರಾದ ಶಾಂತರಾಜ ಪೋಳ, ರಾಘವೇಂದ್ರ ಮುರಗೋಡ, ಅಲ್ತಾಫ ಕಿತ್ತೂರ, ಗೌರವ ಕಾರ್ಯದರ್ಶಿ ಅಮರೇಶ ಹಿಪ್ಪರಗಿ, ಎಸ್.ಎಸ್. ಕಮಡೊಳ್ಳಿಶೆಟ್ರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT