ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರಿ ಯುವಕರಿಂದ ಪಾಕ್ ಪರ ಘೋಷಣೆ: ವಿಚಾರಣೆ ಮುಂದಕ್ಕೆ

Last Updated 10 ಮಾರ್ಚ್ 2021, 8:18 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಕಾಶ್ಮೀರದ ಮೂವರು ಆರೋಪಿಗಳನ್ನು ಬುಧವಾರ ಇಲ್ಲಿಯ ಐದನೇ ಹೆಚ್ಚುವರಿ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರು ಪಡಿಸಲಾಯಿತು.

ಆರೋಪಿ ಪರ ಬೆಂಗಳೂರಿನ ವಕೀಲ ಬಸವರಾಜ ಹಾಗೂ ಸರ್ಕಾರದ ಪರ ಸುಮಿತ್ರಾ ಅಂಚಟಗೇರಿ ವಾದ ಮಂಡಿಸಿದರು. ವಾದ ಆಲಿಸಿದ ನ್ಯಾಯಾಧೀಶ ಕೆ.ಎನ್. ಗಂಗಾಧರ, ವಿಡಿಯೊ ಕಾನ್ಫರೆನ್ಸ್ ಮೂಲಕ ಏ. 15ಕ್ಕೆ ವಿಚಾರಣೆ ನಡೆಸುವುದಾಗಿ ಮುಂದೂಡಿದರು.

ಶರತ್ತು ಬದ್ಧ ಜಾಮೀನಿನೊಂದಿಗೆ ಬೆಂಗಳೂರಿನಲ್ಲಿ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳನ್ನು ಬಿಗಿ ಬಂದೋಬಸ್ತ್‌ನಲ್ಲಿ‌ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ನ್ಯಾಯಾಲಯದ ಆವರಣದಲ್ಲಿ ಪೊಲೀಸ್ ಭದ್ರತೆ ಹಾಕಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT