ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌ ಪರ ಘೋಷಣೆ: ಅರ್ಜಿ ತಿರಸ್ಕಾರ

Last Updated 27 ಜುಲೈ 2020, 21:27 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಕಾಶ್ಮೀರಿ ಮೂಲದ ಮೂವರು ವಿದ್ಯಾರ್ಥಿಗಳು, ತಮ್ಮ ಮೂಲ ಸ್ಥಳಕ್ಕೆ ತೆರಳಲು ಸಲ್ಲಿಸಿದ್ದ ಅರ್ಜಿಯನ್ನು ನಗರದ ಎರಡನೇ ಜೆಎಂಎಫ್‌ ಕೋರ್ಟ್‌ ತಿರಸ್ಕರಿಸಿದೆ.

ಇಲ್ಲಿನ ಕೆಎಲ್‌ಇ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಅಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಗಳು ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿದ್ದ ವಿಡಿಯೊ ವೈರಲ್‌ ಆಗಿತ್ತು. ಅದಕ್ಕೆ ಸಂಬಂಧಿಸಿ ಫೆ. 15ರಂದು ಅವರನ್ನು ಬಂಧಿಸಿ, ದೇಶದ್ರೋಹ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ವಿದ್ಯಾರ್ಥಿಗಳ ಜಾಮೀನಿಗೆ ಬೆಂಗಳೂರಿನ ವಕೀಲರ ತಂಡ ವಾದ ಮಂಡಿಸಿತ್ತು.

ಷರತ್ತು ಬದ್ಧ ಜಾಮೀನಿನ ಮೇಲೆ ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಿದ್ದ ಕೋರ್ಟ್, ರಾಜ್ಯ ಬಿಟ್ಟು ತೆರಳದಂತೆ ನಿರ್ಬಂಧಿಸಿ ಬೆಂಗಳೂರಿನಲ್ಲಿ ಇರಲು ಅವಕಾಶ ಕಲ್ಪಿಸಿತ್ತು. ವಿದ್ಯಾರ್ಥಿಗಳು ತವರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT