ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆರೋಗ್ಯಯುತ ಜೀವನಕ್ಕೆ ಕ್ರೀಡೆ ಅಗತ್ಯ

ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಸಂಗಮೇಶ ಬಬಲೇಶ್ವರ ಹೇಳಿಕೆ
Published 29 ಆಗಸ್ಟ್ 2024, 14:33 IST
Last Updated 29 ಆಗಸ್ಟ್ 2024, 14:33 IST
ಅಕ್ಷರ ಗಾತ್ರ

ಧಾರವಾಡ: ‘ಕ್ರೀಡಾಸಕ್ತ ಮಕ್ಕಳನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡಬೇಕು. ಆರೋಗ್ಯಯುತ ಜೀವನಕ್ಕೆ ಕ್ರೀಡಾ ಚಟುವಟಿಕೆಗಳು ಅಗತ್ಯ’ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.

ನಗರದ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಗುರುವಾರ ಏರ್ಪಡಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.

‘ಹಾಕಿ ಆಟಗಾರ ಧ್ಯಾನ್‌ಚಂದ್ ಅವರ ಜನ್ಮದಿನವನ್ನು ರಾಷ್ಟ್ರೀಯ ಕ್ರೀಡಾದಿನವಾಗಿ ಆಚ‌ರಿಸಲಾಗುತ್ತದೆ. ಅವರ ಸಾಧನೆ ಆಟಗಾರರಿಗೆ ಸ್ಫೂರ್ತಿಯಾಗಿದೆ. ಧ್ಯಾನ್‌ಚಂದ್‌ ಅವರಂತೆ ಕ್ರೀಡಾಪಟುಗಳು ಸಾಧನೆ ಮಾಡಬೇಕು’ ಎಂದರು.

‘ಚಿಕ್ಕಂದಿನಲ್ಲೇ ಮಕ್ಕಳ ಕ್ರೀಡಾ ಪ್ರತಿಭೆ ಗುರುತಿಸಿ, ಪೋಷಿಸಬೇಕು. ಸತತ ಕ್ರೀಡಾಭ್ಯಾಸ ಮಾಡಿದರೆ ಅದ್ಭುತ ಸಾಧನೆ ಮಾಡಲು ಸಾಧ್ಯ’ ಎಂದು ಹೇಳಿದರು.

ಹುಬ್ಬಳ್ಳಿ–ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕಿರ್ ಸನದಿ ಮಾತನಾಡಿ, ‘ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವುದು ನಮ್ಮ ಕರ್ತವ್ಯ. ಮೈದಾನ ಕಲ್ಪಿಸುವ ನಿಟ್ಟಿನಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಿವೇಶನ ಒದಗಿಸಲು ಪ್ರಯತ್ನಿಸಲಾಗುವುದು. ಕ್ರೀಡಾಪಟುಗಳಿಗೆ ಅಗತ್ಯ ನೆರವು ನೀಡಲಾಗುವುದು’ ಎಂದು ತಿಳಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಟಿ.ಮಂಜುನಾಥ, ಆರ್‌.ಬಾವಿಕಟ್ಟಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT