ಹುಬ್ಬಳ್ಳಿ: ಹಿಂದೂ ಕಾರ್ಯಕರ್ತ ಶ್ರೀಕಾಂತ ಪೂಜಾರಿ ಅವರನ್ನು ಬಂಧಿಸಿರುವ ಪೊಲೀಸ್ ಇನ್‌ಸ್ಪೆಕ್ಟರ್ ಅಧಿಕಾರಿಯನ್ನು ಕೂಡಲೇ ಅಮಾನತುಗೊಳಿಸಬೇಕು. ಇಲ್ಲದಿದ್ದರೆ ಇದೇ ತಿಂಗಳ 9ರಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಜೊತೆಗೂಡಿ ಪುನಃ ಹುಬ್ಬಳ್ಳಿಗೆ ಬಂದು ದೊಡ್ಡ ಮಟ್ಟದ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಹೇಳಿದರು.

ಇಲ್ಲಿನ ಹಳೇಹುಬ್ಬಳ್ಳಿಯ ಚೆನ್ನಪೇಟೆಯ ಪಾಂಡುರಂಗ ಕಾಲೊನಿಯಲ್ಲಿರುವ ಹಿಂದೂ ಕಾರ್ಯಕರ್ತ ಶ್ರೀಕಾಂತ ಪೂಜಾರಿ ಅವರ ಮನೆಗೆ ಬುಧವಾರ ಸಂಜೆ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.

ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೊಳ್ಳುತ್ತಿರುವ ಈ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರನ್ನು, ಕರಸೇವಕರನ್ನು ಬಂಧಿಸುವ ಅಗತ್ಯ ಏನಿತ್ತು? ರಾಮಭಕ್ತರಲ್ಲಿ, ಹಿಂದೂಗಳಲ್ಲಿ ಭಯ ಮೂಡಿಸುವುದಕ್ಕಾಗಿಯೇ ಶ್ರೀಕಾಂತ ಅವರನ್ನು ಬಂಧಿಸುವಂತೆ ಪೊಲೀಸರ ಮೇಲೆ ರಾಜ್ಯ ಸರ್ಕಾರ ಒತ್ತಡ ಹೇರಿದೆ. ಇದು ಸರ್ಕಾರದ ದುರ್ಬುದ್ಧಿ, ದುಷ್ಟ ಬುದ್ಧಿ ಎಂದು ಟೀಕಿಸಿದರು.

ಈ ಹೋರಾಟವನ್ನು ಇನ್ನೂ ದೊಡ್ಡ ಮಟ್ಟಕ್ಕೆ ತೆಗೆದುಕೊಂಡು ಹೋಗಲಿದ್ದೇವೆ. ಹಿಂದೂ ಕಾರ್ಯಕರ್ತರನ್ನು ಬಂಧಿಸಿದರೆ ಏನಾಗುತ್ತದೆ ಎನ್ನುವ ಸಂದೇಶವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ನೀಡಲಿದ್ದೇವೆ ಎಂದು ಹೇಳಿದರು.

ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ಎಂ.ಆರ್. ಪಾಟೀಲ ಹಾಗೂ ಹಿರಿಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.