ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ: ಪ್ರತಿಭಟನೆ

Published : 30 ಆಗಸ್ಟ್ 2024, 12:39 IST
Last Updated : 30 ಆಗಸ್ಟ್ 2024, 12:39 IST
ಫಾಲೋ ಮಾಡಿ
Comments

ಧಾರವಾಡ: 'ಮಹಾರಾಷ್ಟ್ರದ ನಾಸಿಕ್ ನಲ್ಲಿ ಏರ್ಪಡಿಸಿದ್ದ ಸಭೆಯೊಂದರಲ್ಲಿ ರಾಮಗಿರಿ ಸ್ವಾಮಿ ಅವರು ಮಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ನಗರದ ಅಂಜುಮನ್ ಸಂಸ್ಥೆಯವರು ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಅಂಜುಮನ್ ಸಂಸ್ಥೆಯಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೌನ ಮೆರವಣಿಗೆ ನಡೆಸಿದರು. ತೋಳಿಗೆ ಕಪ್ಪು ಪಟ್ಟಿ ಕಟ್ಟಿದ್ದರು.

ಅಂಜುಮನ್ ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಮಾತನಾಡಿ, ಅವಹೇಳನಕಾರಿ ಹೇಳಿಕೆ ನೀಡಿದವರ ವಿರುದ್ಧ ಕ್ರಮ ಜರುಗಿಸಬೇಕು. ಕಠಿಣ ಕಾನೂನು ರೂಪಿಸಬೇಕು ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT