ಧಾರವಾಡ: ಹುಬ್ಬಳ್ಳಿಯ ಚನ್ನಮ್ಮ(ಈದ್ಗಾ) ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಬಾರದು ಎಂದು ಆಗ್ರಹಿಸಿ ವಿವಿಧ ದಲಿತ ಸಂಘ-ಸಂಸ್ಥೆಗಳ ಮಹಾಮಂಡಳ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡು ಮಹಾನಗರ ಪಾಲಿಕೆ ವಿರುದ್ಧ ಘೋಷಣೆ ಕೂಗಿದರು.
ಮುಖಂಡ ಗುರುನಾಥ ಉಳ್ಳಿಕಾಶಿ ಮಾತನಾಡಿ, ‘ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವ ಆಚರಣೆ, ವರ್ಷದಲ್ಲಿ ಎರಡು ಬಾರಿ ಮುಸ್ಲಿಮರು ಪ್ರಾರ್ಥನೆ ಸಲ್ಲಿಸಲು ಮಾತ್ರ ಅವಕಾಶ ಇದೆ. ಇನ್ನಿತರ ಧಾರ್ಮಿಕ ಆಚರಣೆಗಳಿಗೆ ಅವಕಾಶ ಇಲ್ಲ’ ಎಂದರು.
‘ಚನ್ನಮ್ಮ ವೃತ್ತ, ನೆಹರೂ ಮೈದಾನ, ರೈಲ್ವೆ ಮೈದಾನ, ದೇಶಪಾಂಡೆ ನಗರದ ಮೈದಾನಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸದೆ ಈದ್ಗಾದಲ್ಲಿ ಪ್ರತಿಷ್ಠಾಪನೆಗೆ ಅನುಮತಿ ಕೇಳುತ್ತಿರುವುದರ ಹಿಂದೆ ಷಡ್ಯಂತ್ರ ಇದೆ’ ಎಂದು ಆರೋಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.