ಇಂಧನ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ

7
ಬರಿ ಭಾಷಣದಲ್ಲಿ ಮೈ ಮರೆತಿರುವ ಪ್ರಧಾನಿ ನರೇಂದ್ರ ಮೋದಿ: ಕಳಸಾ ಬಂಡೂರಿ ರೈತ ಹೋರಾಟ ಸಮಿತಿ

ಇಂಧನ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ

Published:
Updated:
Deccan Herald

ಹುಬ್ಬಳ್ಳಿ: ಪೆಟ್ರೋಲ್, ಡೀಸೆಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕರ್ನಾಟಕ ಬಳಸಾ ಬಂಡೂರಿ ರೈತ ಹೋರಾಟ ಸಮಿತಿ ಸದಸ್ಯರು ಕೇಂದ್ರ ಸರ್ಕಾರದ ವಿರುದ್ಧ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಕೇವಲ ಘೋಷಣೆಗಳನ್ನು ಮಾಡಿದ ಸರ್ಕಾರ, ಅವುಗಳನ್ನು ಕಾರ್ಯಗತಗೊಳಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಪ್ರಧಾನಿ ಬರಿ ಭಾಷಣ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಹೇಳಿದರು.

ಕೇಂದ್ರ ಸರ್ಕಾರದ ದುರಾಡಳಿತ ಕಾರಣ ದೇಶ ಅದೋಗತಿಯತ್ತ ಸಾಗಿದೆ. ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಬೆಲೆ ವಿಪರೀತ ಏರಿಕೆಯಾಗಿದೆ. ಅದರ ಪರಿಣಾಮ ಅಗತ್ಯ ವಸ್ತುಗಳು ಬೆಲೆಯೂ ಹೆಚ್ಚಾಗಿದೆ. ಆಟೊ, ಬಸ್‌ ಪ್ರಯಾಣ ದರವೂ ಗಗನಮುಖಿಯಾಗಿರುವುದರಿಂದ ಜನ ಸಾಮಾನ್ಯರು ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಸಮಿತಿಯ ಅಧ್ಯಕ್ಷ ಸಿದ್ದು ತೇಜಿ ತಿಳಿಸಿದರು.

ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಗರಿಷ್ಠವಾಗಿದ್ದರೂ, ಇಂಧನ ಬೆಲೆ ಏರಿಕೆ ಮಾಡಿರಲಿಲ್ಲ. ಎನ್‌ಡಿಎ ಸರ್ಕಾರ ಅಧಿಕಾರ ಚುಕ್ಕಾಣಿ ಹಿಡಿದ ನಂತರ ಕಚ್ಚಾ ತೈಲದ ಬೆಲೆ ಕಡಿಮೆಯಾದರೂ ಅದರ ಲಾಭ ಗ್ರಾಹಕರಿಗೆ ಸಿಗಲಿಲ್ಲ. ಸರ್ಕಾರ ಬೆಲೆ ಇಳಿಸಬೇಕು, ಇಲ್ಲವಾದರೆ ಅಧಿಕಾರ ಬಿಟ್ಟು ಹೋಗಬೇಕು ಎಂದು ಅವರು ಹೇಳಿದರು.

ಈಗಲಾದರೂ ಎಚ್ಚೆತ್ತುಕೊಂಡು ಜನ ಸಾಮಾನ್ಯರ ಭಾವನೆಗಳಿಗೆ ಸ್ಪಂದಿಸಬೇಕು. ಇಲ್ಲವಾದರೆ ಹೋರಾಟ ತೀವ್ರಗೊಳಿಸಬೇಕಾಗುತ್ತದೆ. ಆಸ್ತಿಪಾಸ್ತಿ ನಷ್ಟವಾದರೆ ಅದಕ್ಕೆ ಕೇಂದ್ರ ಸರ್ಕಾರವೇ ಹೊಣೆಯಾಗಲಿದೆ ಎಂದು ಎಚ್ಚರಿಕೆ ನೀಡಿದರು. ಮುಖಂಡ ರಮೇಶ ಬೋಸ್ಲೆ ಇದ್ದರು. 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !