ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ನ.12ರಂದು ಹುಬ್ಬಳ್ಳಿಯಲ್ಲಿ ಪ್ರತಿಭಟನೆ

Last Updated 9 ನವೆಂಬರ್ 2021, 8:27 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಇತ್ತೀಚೆಗೆ ನಡೆದ ಉಪಚುನಾವಣೆ ಸಮಯದಲ್ಲಿ ಪರಿಶಿಷ್ಟರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗುತ್ತಾರೆ ಎಂದು ಹೇಳಿಕೆ ನೀಡುವ ಮೂಲಕ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪರಿಶಿಷ್ಟರನ್ನು ಅವಮಾನಿಸಿದ್ದಾರೆ. ಅವರು ಕ್ಷಮೆಯಾಚಿಸಬೇಕು ಎಂದು ಬಿಜೆಪಿ ರಾಜ್ಯ ಎಸ್‌ಸಿ ಮೋರ್ಚಾ ಕಾರ್ಯದರ್ಶಿ ಮಹೇಂದ್ರ ಕೌತಾಳ ಆಗ್ರಹಿಸಿದರು.

ಇದನ್ನು ಖಂಡಿಸಲು ಬಿಜೆಪಿ ನ. 12ರಂದು ನಗರದ ಅಂಬೇಡ್ಕರ್‌ ವೃತ್ತದಿಂದ ತಹಶೀಲ್ದಾರ್‌ ಕಚೇರಿ ತನಕ ಪ್ರತಿಭಟನೆ ಹಮ್ಮಿಕೊಂಡಿದೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಪರಿಶಿಷ್ಟರನ್ನು ಕಾಂಗ್ರೆಸ್‌ ತುಚ್ಛವಾಗಿ ಕಂಡಿದೆ. ಆದರೆ, ಬಿಜೆಪಿ ಅವರಿಗೆ ಗರಿಷ್ಠ ಅವಕಾಶ ನೀಡಿದೆ. ಪರಿಶಿಷ್ಟರು ಮತ್ತು ಮುಸ್ಲಿಮರನ್ನು ಕಾಂಗ್ರೆಸ್‌ ತನ್ನ ಮತಬ್ಯಾಂಕ್‌ಗಾಗಿ ಬಳಸಿಕೊಂಡಿತು. ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ಶವಸಂಸ್ಕಾರಕ್ಕೆ ಕಾಲು ಎಕರೆ ಜಾಗ ಕೊಡಲಿಲ್ಲ. ಕಾಂಗ್ರೆಸ್‌ನಿಂದ ಪ್ರಧಾನಿಗಳಾದ ಜವಾಹರಲಾಲ್‌ ನೆಹರೂ, ಇಂದಿರಾ ಗಾಂಧಿ ಮತ್ತು ರಾಜೀವ್‌ ಗಾಂಧಿ ಅವರ ಶವಸಂಸ್ಕಾರಕ್ಕೆ 15 ಎಕರೆ ಜಾಗ ನೀಡಲಾಗಿದೆ’ ಎಂದು ಟೀಕಿಸಿದರು.

‘ಹಿಂದಿನ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಲ್ಲಿ ಸೋಲುವ ಹಂತದಲ್ಲಿದ್ದ ಸಿದ್ದರಾಮಯ್ಯ ಅವರನ್ನು ಗೆಲ್ಲಿಸಿದ್ದು ಪರಿಶಿಷ್ಟರ ಮತಗಳು. ಅವರು ಕೈ ಹಿಡಿದಿದ್ದರಿಂದಲೇ ಸಿದ್ದರಾಮಯ್ಯ ಗೆಲುವು ಪಡೆದರು’ ಎಂದರು.

ಎಸ್‌ಸಿ ಮೋರ್ಚಾದ ರಾಜ್ಯ ಕಾರ್ಯಕಾರಣಿ ಸದಸ್ಯ ವೀರಭದ್ರಪ್ಪ ಹಾಲಹರವಿ ಮಾತನಾಡಿ ‘ಸಿದ್ದರಾಮಯ್ಯ ಪರಿಶಿಷ್ಟರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರ ವ್ಯಕ್ತಿತ್ವಕ್ಕೂ ಅವರು ನೀಡಿರುವ ಹೇಳಿಕೆಗೂ ತಾಳೆಯಾಗುವುದಿಲ್ಲ. ಪರಿಶಿಷ್ಟರು ಯಾವ ರಾಜಕೀಯ ಪಕ್ಷಗಳಿಗೂ ಫುಟ್‌ಬಾಲ್‌ ಅಲ್ಲ. ಪರಿಶಿಷ್ಟರು ಹೊಟ್ಟೆಪಾಡಿಗಾಗಿ ಕಾಂಗ್ರೆಸ್‌ಗೆ ಹೋಗುತ್ತಾರೆಯೇ’ ಎಂದು ಪ್ರಶ್ನಿಸಿದರು.

ಎಸ್‌ಸಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಅಮ್ಮಿನಬಾವಿ, ಎಸ್‌ಟಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಪುಂಡಲೀಕ ತಳವಾರ, ಮಾಧ್ಯಮ ವಕ್ತಾರ ರವಿ ನಾಯಕ, ಎಸ್‌ಸಿ ಮೋರ್ಚಾ ಸೆಂಟ್ರಲ್‌ ಕ್ಷೇತ್ರದ ಅಧ್ಯಕ್ಷ ಸುಭಾಷ ಅಕ್ಕಲಕೋಟೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT