ಬುಧವಾರ, ಜನವರಿ 19, 2022
18 °C

ಹುಬ್ಬಳ್ಳಿ: ಅತಿಥಿ ಉಪನ್ಯಾಸಕರಿಂದ ಅಹೋರಾತ್ರಿ ಧರಣಿ ನಾಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ‘ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸೇವಾ ಭದ್ರತೆಗೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಸೂಕ್ತ ನಿರ್ಣಯ ತೆಗೆದುಕೊಳ್ಳಬೇಕು ಎಂದು ಬೆಂಗಳೂರಿನ ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಪ್ರೊ. ಹನುಮಂತಗೌಡ ಕಲ್ಮನಿ ಹೇಳಿದರು.

‘ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಸದಸ್ಯರು ಧಾರವಾಡ ಜಂಟಿ ನಿರ್ದೇಶಕರ ಕಚೇರಿ ಎದುರು ಡಿ. 10ರಂದು ಅಹೋರಾತ್ರಿ ಧರಣಿ ನಡೆಸಲಿದ್ದಾರೆ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅನೇಕ ವರ್ಷಗಳಿಂದ 14 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕನಿಷ್ಠ ವೇತನ ಪಡೆದು ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಸೇವಾ ಭದ್ರತೆ ಒದಗಿಸಬೇಕು ಎಂದು ಸಾಕಷ್ಟು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಆದರೆ, ಈವರೆಗೂ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿಲ್ಲ’ ಎಂದು ಆರೋಪಿಸಿದರು.

‘ಯುಜಿಸಿ ನಿಯಮಾವಳಿ ಪ್ರಕಾರ ಸೇವಾ ಭದ್ರತೆಗೆ ಅಥವಾ ಕಾಯಂ ಮಾಡಿಕೊಳ್ಳಲು ತಾಂತ್ರಿಕ ತೊಂದರೆಗಳಿವೆ ಎನ್ನುತ್ತಿದ್ದಾರೆ. ಆದರೆ ಏನೆಂಬುದು ನಿಖರವಾಗಿ ಹೇಳುತ್ತಿಲ್ಲ. ಕಾನೂನು ತಿದ್ದುಪಡಿ ಮಾಡಿಯಾದರೂ ಕಾಯಂಗೊಳಿಸಬೇಕು. ಇಲ್ಲವೇ, 12 ತಿಂಗಳು ವೇತನ ನೀಡಿ ಸೇವಾ ಭದ್ರತೆ ನೀಡಬೇಕು’ ಎಂದು ಆಗ್ರಹಿಸಿದರು.

ಡಾ. ವಿಜಯಲಕ್ಷ್ಮಿ ಜೋಶಿ, ಡಾ.‌ ಚಂದ್ರಶೇಖರ ಕಾಳನ್ನವರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು