ಶನಿವಾರ, ಫೆಬ್ರವರಿ 27, 2021
30 °C

ಹುಬ್ಬಳ್ಳಿ: ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗೆ ಆಗ್ರಹಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಬೆಂಗಳೂರು ಪುಣೆ ರಾಷ್ಟ್ರೀಯ ಹೆದ್ದಾರಿ ಯ ಹುಬ್ಬಳ್ಳಿ ಧಾರವಾಡ ನಡುವಿನ ರಸ್ತೆ ವಿಸ್ತರಣೆ ಮಾಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡರು ಹುಬ್ಬಳ್ಳಿಯ ಗಬ್ಬೂರ ಕ್ರಾಸ್ ಬಳಿಯ ಟೊಲ್ ನಾಕಾದಲ್ಲಿ ಪ್ರತಿಭಟನೆ ಮಾಡಿದರು.

ರಸ್ತೆ ತಡೆ ನಡೆಸಿದ್ದರಿಂದ ವಾಹನಗಳು ಸಾಲುಗಟ್ಡಿ ನಿಂತಿದ್ದವು. ಟೋಲ್ ಸಂಗ್ರಹಕ್ಕೂ ವಿರೋಧ ವ್ಯಕ್ತಪಡಿಸಿದರು.
ಬೆಂಗಳೂರು ಪುಣೆ ರಸ್ತೆ ಇಲ್ಲಿ ಮಾತ್ರ ದ್ವಿಪಥವಾಗಿದೆ. ಇದರಿಂದ ಅಪಘಾತ ಸಂಭವಿಸಿ ಜನರು ಪ್ರಾಣ ಕಳೆದುಕೊಳ್ಳುವಂತಾಗಿದೆ. ಕೂಡಲೇ ಅದನ್ನು ಚತುಷ್ಪಥ ರಸ್ತೆಯಾಗಿ ವಿಸ್ತರಿಸಬೇಕು ಎಂದು ಆಗ್ರಹಿಸಿದರು.

ಅಲ್ತಾಫ ಹಳ್ಳೂರ, ಮೋಹನ ಅಸುಂಡಿ, ಅನ್ವರ್ ಮುಧೋಳ, ಶಾಕೀರ್ ಸನದಿ, ಕಿರಣ ಮೂಗನಸ್ತ, ದೀಪಾ ಗೌರಿ ಇದ್ದರು

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು