ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಘಟಗಿ: ನೇಹಾ ಹಿರೇಮಠ ಕೊಲೆ ಖಂಡಿಸಿ ಪ್ರತಿಭಟನಾ ಮೆರವಣಿಗೆ

Published 24 ಮೇ 2024, 5:53 IST
Last Updated 24 ಮೇ 2024, 5:53 IST
ಅಕ್ಷರ ಗಾತ್ರ

ಕಲಘಟಗಿ: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಖಂಡಿಸಿ ಪಟ್ಟಣದಲ್ಲಿ ಶನಿವಾರ ರೈತ ಸಂಘಟನೆ ನೇತೃತ್ವದಲ್ಲಿ ವಿವಿಧ ಸಮಾಜದವರು ಪ್ರತಿಭಟನೆ ನಡೆಸಿದರು.

ಪಟ್ಟಣದ ಆಂಜನೇಯ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು, ತಹಶೀಲ್ದಾರ್ ಕಚೇರಿವರೆಗೆ‌ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಕೊಲೆ ಆರೋಪಿ ಫಯಾಜ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಂತರ ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ ಪ್ರತಿಭಟನಕಾರರು, ತಪ್ಪಿತಸ್ಥನಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

‘ರಾಜ್ಯದಲ್ಲಿ ದೌರ್ಜನ್ಯ, ಶೋಷಣೆ, ಕೊಲೆ ಪ್ರಕರಣಗಳು ಹೆಚ್ಚುತ್ತಿದ್ದು ಮಹಿಳೆಯರು, ವಿದ್ಯಾರ್ಥಿನಿಯರಿಗೆ ಭದ್ರತೆ, ರಕ್ಷಣೆ ಇಲ್ಲದಂತಾಗಿದೆ. ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ವಹಿಸಿರುವುದು ಖಂಡನೀಯ’ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸುಪ್ರೀಂ ಕೋರ್ಟ್ ನಿರ್ದೇಶನದಂತೆ ವಿದ್ಯಾರ್ಥಿನಿಯರು, ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.

ಹನ್ನೆರಡು ಮಠದ ರೇವಣ ಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ಶಶಿಧರ ನಿಂಬಣ್ಣವರ, ಐ.ಸಿ.ಗೋಕುಲ, ಪರಶುರಾಮ ಹುಲಿಹೊಂಡ, ಅಣ್ಣಪ್ಪ ಓಲೆಕಾರ, ವಜ್ರಕುಮಾರ ಮಾದನಬಾವಿ, ಮಹಾಂತೇಶ ತಹಶೀಲ್ದಾರ್, ಮಂಗಲಪ್ಪ ಲಮಾಣಿ, ಶಿವಯೋಗಿ ಶಿಂಧೋಗಿಮಠ, ಗುರುನಾಥ ದಾನೇನವರ, ಈರಣ್ಣ ಕುಬಸದ, ಶಿವಯ್ಯ ತೇಗುರಮಠ, ರಾಕೇಶ ಅಳಗವಾಡಿ, ಸಂಗಮೇಶ ತೋಟಗಂಟಿ, ಶಿವಪುತ್ರಯ್ಯ ತೇಗುರಮಠ, ಶ್ರೀಕಾಂತ ಶಿಗ್ಲಿ, ಬಸವರಾಜ ಮಾದರ, ಜಗದೀಶ ಮೂಕಿ, ಯಲ್ಲಪ್ಪ ಮೇಲಿನಮನಿ, ಅಶೋಕ ಆಡಿನವರ,‌ ಶಂಕರಗೌಡ ಭಾವಿಕಟ್ಟಿ, ಚನ್ನಯ್ಯ ಹಿರೇಮಠ, ಸಚಿನ ಪವಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT