ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ಕೋವಿಡ್–19 ಹಿನ್ನೆಲೆ, ಜನರ ಆರೋಗ್ಯ ಕಾಳಜಿಗೆ ಆಗ್ರಹಿಸಿ ಪ್ರತಿಭಟನೆ

Last Updated 27 ಜುಲೈ 2020, 13:28 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಕೋವಿಡ್–19 ಹಿನ್ನೆಲೆಯಲ್ಲಿ ಸರ್ಕಾರ ಜನರ ಆರೋಗ್ಯ ಕಾಳಜಿಗೆ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿಸಂವಿಧಾನ ಸುರಕ್ಷಾ ಸಮಿತಿ ಸದಸ್ಯರು ನಗರದ ಮಿನಿ ವಿಧಾನಸೌಧದ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಟಿ.ವಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಕೊರೊನಾ ಸುದ್ದಿಗಳು ಜನರಲ್ಲಿ ಆತಂಕ ಸೃಷ್ಟಿಸುತ್ತಿವೆ. ಇದನ್ನು ಹೋಗಲಾಡಿಸಲು ಸರ್ಕಾರ ವ್ಯಾಪಕವಾಗಿ ಜಾಗೃತಿ ಮೂಡಿಸಬೇಕು. ಭೀತಿ ಸೃಷ್ಟಿಸುವ ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸಮುದಾಯಕ್ಕೆ ಸೋಂಕು ಹರಡಿರುವುದರಿಂದ, ಗ್ರಾಮ ಮತ್ತು ವಾರ್ಡ್‌ ಮಟ್ಟದಲ್ಲಿ ‘ಆರೋಗ್ಯ ಸಹಾಯ ಬೂತ್‌’ಗಳನ್ನು ಸ್ಥಾಪಿಸಬೇಕು. ಕೋವಿಡ್ ವಾರಿಯರ್‌ಗಳ ಸಂಖ್ಯೆಯನ್ನು ಹೆಚ್ಚಿಸಿ, ಅಗತ್ಯ ಸೌಲಭ್ಯ ಮತ್ತು ಸುರಕ್ಷಾ ಸಾಮಗ್ರಿಗಳನ್ನು ನೀಡಬೇಕು ಎಂದರು.

ಕೋವಿಡ್ ನಿಯಂತ್ರಣಕ್ಕೆ ಬರುವವರೆಗೆ ಖಾಸಗಿ ಆಸ್ಪತ್ರೆಗಳನ್ನು ಸರ್ಕಾರದ ತನ್ನ ನಿಯಂತ್ರಣಕ್ಕೆ ಪಡೆಯಬೇಕು. ಕೊಳೆಗೇರಿ ಪ್ರದೇಶಗಳಲ್ಲಿ ಕೋವಿಡ್ ಕೇರ್ ಕೇಂದ್ರಗಳನ್ನು ತೆರೆಯಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಲ್ಲಾ ರೀತಿಯ ಆರೋಗ್ಯ ಸಮಸ್ಯೆಗಳಿಗೂ ಔಷಧ ಸಿಗುವಂತೆ ಮಾಡಬೇಕು ಎಂದು ಆಗ್ರಹಿಸಿದರು.

ಬಳಿಕ, ತಹಶೀಲ್ದಾರ್ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು. ಸಮಿತಿ ಅಧ್ಯಕ್ಷ ಪಿತಾಂಬ್ರಪ್ಪ ಬಿಳಾರ, ಕಾರ್ಯಾಧ್ಯಕ್ಷರಾದ ಅನ್ವರ ಮುಧೋಳ, ಮಹೇಶ ಪತ್ತಾರ, ಕಾರ್ಯದರ್ಶಿ ವಿಜಯ ಗುಂಟ್ರಾಳ, ಸಂಚಾಲಕ ಅಶ್ರಫ ಅಲಿ, ಸಹ ಸಂಚಾಲಕ ಅಯೂಬ್ ಸವಣೂರ, ಸದಸ್ಯರಾದ ಸುರೇಶ ಖಾನಾಪುರ, ಬಾಬಾಜಾನ್ ಮುಧೋಳ, ಶಮೀಮ್ ಮುಲ್ಲಾ, ಹನುಮಂತ ಹರಿಜನ, ವಿಜಯ ಕರ್ರ, ಎಸ್‌.ಎನ್. ಮಲ್ಲಮ್ಮನವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT