ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಿಧ ಬೇಡಿಕೆ ಈಡೇರಿಕೆಗಾಗಿ ಸೆ. 21ಕ್ಕೆ ಧರಣಿ: ಮಾನ್ಪಡೆ

Last Updated 19 ಸೆಪ್ಟೆಂಬರ್ 2020, 12:59 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಗ್ರಾಮ ಪಂಚಾಯ್ತಿ ಸಿಬ್ಬಂದಿ ವೇತನಕ್ಕೆ ಕೊರತೆ ಇರುವ ₹382 ಕೋಟಿ ಅನುದಾನ ಬಿಡುಗಡೆ ಸೇರಿದಂತೆ, ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೆ. 21ರಂದು ರಾಜ್ಯದಾದ್ಯಂತ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ’ ಎಂದುರಾಜ್ಯ ಪಂಚಾಯ್ತಿ ನೌಕರರ ಸಂಘದ (ಸಿಐಟಿಯು ಸಂಯೋಜಿತ) ಅಧ್ಯಕ್ಷ ಮಾರುತಿ ಮಾನ್ಪಡೆ ಹೇಳಿದರು.

‘ರಾಜ್ಯದ 6,024 ಗ್ರಾಮ ಪಂಚಾಯಿತಿಗಳ 65 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಕೊರೊನಾ ನಿಯಂತ್ರಣಕ್ಕಾಗಿ ಹಗಲಿರುಳು ದುಡಿಯುತ್ತಿದ್ದಾರೆ. ಆದರೆ, ಅವರ ವೇತನಕ್ಕೆ ಬೇಕಾಗುವ ₹900 ಕೋಟಿ ಅನುದಾನದಲ್ಲಿ, ಇದುವರೆಗೆ ಕೇವಲ ₹520 ಕೋಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. ಉಳಿದ ಹಣ ಮಂಜೂರಾಗದಿರುವುದರಿಂದ, ಸಿಬ್ಬಂದಿ ವರ್ಷಕ್ಕೆ ಕೇವಲ 8 ತಿಂಗಳು ಮಾತ್ರ ವೇತನ ಪಡೆಯುವಂತಾಗಿದೆ’ ಎಂದು ಶನವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಪಂಪ್ ಆಪರೇಟರ್‌ಗಳಿಗೆ ಅರ್ಧ ವೇತನ ನೀಡುವ ನಿರ್ಧಾರವನ್ನು ಹಿಂಪಡೆಯಬೇಕು. ಕ್ಲರ್ಕ್ ಕಂ ಡಾಟಾ ಆಪರೇಟರ್‌ಗಳಿಗೆ ಬಡ್ತಿ ನೀಡಲು ವೃಂದ ಮತ್ತು ನೇಮಕಾತಿಗಳಿಗೆ ತಿದ್ದುಪಡಿ ಮಾಡಬೇಕು. ಕನಿಷ್ಠ ವೇತನ ಪಡೆಯುವ ಎಲ್ಲರಿಗೂ ಬಿಪಿಎಲ್ ಕಾರ್ಡ್ ಉಳಿಸಿಕೊಳ್ಳಲು ಆದಾಯ ಮಿತಿ ₹1.2 ಲಕ್ಷದಿಂದ ₹2 ಲಕ್ಷಕ್ಕೆ ಏರಿಸಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT