ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಪ್ರತಿಭಟನೆ

ಹುಬ್ಬಳ್ಳಿ: ಕೇಶ್ವಾಪುರದ ಸೇಂಟ್ ಮೈಕಲ್ ಸ್ಕೂಲ್ ಬಳಿ ರಸ್ತೆ ತೀರಾ ಹದಗೆಟ್ಟಿದ್ದು, ಸಾರ್ವಜನಿಕರ ಸಂಚಾರಕ್ಕೆ ತೊಂದರೆ
ಯಾಗುತ್ತಿದೆ. ಕೂಡಲೇ ಅಭಿವೃದ್ಧಿ ಪಡಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು, ಬಧುವಾರ ರಸ್ತೆ ಮೇಲೆ ರಂಗೋಲಿ ಬಿಡಿಸಿ ಪ್ರತಿಭಟನೆ ಮಾಡಿದರು.
ಒಳಚರಂಡಿ ಕಾಮಗಾರಿ ಪೂರ್ಣಗೊಂಡು ವರ್ಷ ಕಳೆದಿದೆ. ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ಹಾಗೂ ಶಾಸಕ ಜಗದೀಶ ಶೆಟ್ಟರ್ ಅವರಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಲಾಗಿದೆ. ಅವರ ನಿರ್ಲಕ್ಷದಿಂದ ಸಾರ್ವಜನಿಕರು ಸಮಸ್ಯೆ ಅನುಭವಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಸ್ತೆ ಅಭಿವೃದ್ಧಿ ಮಾಡುತ್ತಿಲ್ಲ. ಬ್ಯಾಂಕ್ಗಳು, ಹೋಟೆಲ್ಗಳು, ಶಾಲಾ–ಕಾಲೇಜುಗಳು ಈ ಪ್ರದೇಶದಲ್ಲಿದ್ದು, ಹದಗೆಟ್ಟ ರಸ್ತೆಯಿಂದ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಹೇಳಿದರು.
ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ, ಸಂತೋಷ ಚಲವಾದಿ, ಹೂವಪ್ಪ ದಾಯಗೋಡಿ, ತೇಜರಾಜ್ ಜೈನ್, ಪ್ರೀತೇಶ ಪಾಲ್ಗೋಟ, ಸುರೇಶ, ಅಶೋಕ ನರಗುಂದ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.