ಹುಬ್ಬಳ್ಳಿ: ‘ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಮತ್ತು ಬಂಡವಾಳಶಾಹಿ ಪರ ನೀತಿ ಖಂಡಿಸಿ ಸೆ.4ರಂದು ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ರಾಜ್ಯ ಉಪಾಧ್ಯಕ್ಷ ವೀರೇಶ್ ಎನ್.ಎಸ್. ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದುಡಿಯುವ ವರ್ಗದ ಮೇಲಿನ ನಿರಂತರ ದಾಳಿ ಎದುರಿಸಲು ಪ್ರಬಲ, ಸಂಘಟಿತ ಚಳವಳಿ ಅತ್ಯಗತ್ಯ. ಮುಂದಿನ ದಿನಗಳಲ್ಲಿ ದೇಶದಾದ್ಯಂತ ಚಳವಳಿಯನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು’ ಎಂದರು.

‘ಒಗ್ಗಟ್ಟಿನ ಹೋರಾಟ ಕಟ್ಟಲು ಧರ್ಮ, ಜಾತಿ, ಭಾಷೆ, ಪ್ರದೇಶ, ಜನಾಂಗೀಯ ಭೇದವನ್ನು ಮೀರಿ ಕಾರ್ಮಿಕರು, ಕೃಷಿ ಕಾರ್ಮಿಕರು, ಬಡ ರೈತರು, ಗ್ರಾಮೀಣ ಮತ್ತು ನಗರ ಕೆಳ ಮಧ್ಯಮ ವರ್ಗಗಳ ಶೋಷಿತ ಜನರು ಒಂದಾಗುವುದು ಮಹತ್ವದ್ದಾಗಿದೆ. ಆದರೆ, ಬಂಡವಾಳಶಾಹಿ ವರ್ಗ ಹಾಗೂ ಮತ್ತದರ ಸೇವಕ ಸರ್ಕಾರಗಳು ತಮ್ಮ ಹಿತಾಸಕ್ತಿಗಾಗಿ ನಮ್ಮನ್ನು ಒಡೆದು ಆಳುವ ಪಿತೂರಿ ಮಾಡುತ್ತಿವೆ’ ಎಂದು ಆರೋಪಿಸಿದರು.

ಬೇಡಿಕೆಗಳು:

ಕಾರ್ಮಿಕ ಸಂಹಿತೆ ರದ್ದುಗೊಳಿಸುವುದು, ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ತಡೆಯುವುದು, ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್ ಅಳವಡಿಕೆ ರದ್ದುಮಾಡುವುದು, ಕೆಲಸದ ಅವಧಿ ಹೆಚ್ಚಳ ಮಾಡದಿರುವುದು, ಕಾಯಂ ನೌಕರರ ಸಂಖ್ಯೆ ಕಡಿತ ತಪ್ಪಿಸುವುದು, ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸುವುದು, ಅಸಂಘಟಿತ ವಲಯದ ಕಾರ್ಮಿಕರಿಗೆ ಕಲ್ಯಾಣ ಮಂಡಳಿ ರಚಿಸಿ ಸಾಮಾಜಿಕ ಭದ್ರತೆ ಖಾತರಿಪಡಿಸುವುದು, ಆಹಾರ, ಔಷಧ, ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ನಿಯಂತ್ರಿಸುವುದು, ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಜಾರಿಗೊಳಿಸುವುದು, ರಾಷ್ಟ್ರೀಯ ಶಿಕ್ಷಣ ನೀತಿ ರದ್ದು ಮಾಡುವುದು.

ಚಂದ್ರಶೇಖರ ಮೇಟಿ, ತಾಯಿದಾಸ್, ಗಂಗಾಧರ ಬಡಿಗೇರ, ಭುವನಾ ಬಳ್ಳಾರಿ, ಭಾರತಿ ಶೆಟ್ಟರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.