ಹುಬ್ಬಳ್ಳಿ: ಸ್ಥಾನಿಕ ವೈದ್ಯರ ಶಿಷ್ಯವೇತನ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ಸ್ಥಾನಿಕ ವೈದ್ಯರ ಸಂಘದ (ಕೆಆರ್‌ಡಿ) ನೇತೃತ್ವದಲ್ಲಿ ಇಲ್ಲಿನ ಕಿಮ್ಸ್‌ನಲ್ಲಿ ಕಿರಿಯ ವೈದ್ಯರು ಆರಂಭಿಸಿರುವ ಮುಷ್ಕರ ಶುಕ್ರವಾರ 5ನೇ ದಿನಕ್ಕೆ ಕಾಲಿಟ್ಟಿದೆ. ಇದರಿಂದಾಗಿ ರೋಗಿಗಳ ಚಿಕಿತ್ಸೆಯಲ್ಲಿ ವ್ಯತ್ಯಯ ಉಂಟಾಗಿದ್ದು, ರೋಗಿಗಳು ಪರದಾಡುವಂತಾಗಿದೆ.