ಧಾರವಾಡ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಮನಸೂರ ರೇವಣಸಿದ್ಧೇಶ್ವರ ಮಠದ ಬಸವರಾಜ ದೇವರಿಗೆ ಅಗೌರವ ತೋರಿರುವ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿ ಹಾಲುಮತ ಮಹಾಸಭಾ ಮತ್ತು ರಾಯಣ್ಣನ ಅಭಿಮಾನಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.

ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಸಚಿವ ಸಂತೋಷ ಲಾಡ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

‘ಜನವರಿ 26 ರಂದು ಹುತಾತ್ಮ ದಿನಾಚರಣೆ ಅಂಗವಾಗಿ ಹಾಲುಮತ ಸಮಾಜದವರು ಬಸವರಾಜ ದೇವರ ಸಾನ್ನಿಧ್ಯದಲ್ಲಿ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಾಯಣ್ಣನ ಚಿತ್ರಕ್ಕೆ ಪೂಜೆ ಸಲ್ಲಿಸುತ್ತಿದ್ದರು.
ಸಮೀಪದ ಹೋಟೆಲ್ಗೆ ಆಗಮಿಸಿದ್ದ ಸಚಿವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು. ಆದರೆ, ಅವರು ಏಕವಚನದಲ್ಲಿ ಮಾತನಾಡಿ, ಸ್ವಾಮೀಜಿ ಮತ್ತು ಆಯೋಜಕರಿಗೆ ಅಪಮಾನ ಮಾಡಿದರು’ ಎಂದು ಪ್ರತಿಭಟನಕಾರರು ದೂರಿದರು.

‘ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳು ಹಾಗೂ ಬಸವರಾಜ ದೇವರ ಬಳಿ ಸಚಿವರು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.

ಹಾಲುಮತ ಮಹಾಸಭಾದ ಅಧ್ಯಕ್ಷ ರುದ್ರಣ್ಣ ಗುಳಗುಳಿ, ರವಿ ದಂಡಿನ, ದೇವರಾಜ ಕಂಬಳಿ, ಉದ್ಯಮಿ ಮಂಜುನಾಥ ಮಕ್ಕಳಗೇರಿ, ರಾಜೇಶ್ವರಿ ಸಾಲಗಟ್ಟಿ, ರಾಯಪ್ಪ ಐರಣಿ, ಶಿವು ಬೆಳಾರದ, ಡಿ.ಟಿ.ಪಾಟೀಲ, ಮಡಿವಾಳಪ್ಪ ಬಿದರಗಡ್ಡಿ, ರವಿ ಪಾಟೀಲ, ಬಸವರಾಜ ನಾಯ್ಕರ, ಮಂಜುನಾಥ ನಡಟ್ಟಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.