ಹುಬ್ಬಳ್ಳಿ: ಅಂತರರಾಷ್ಟ್ರೀಯ ಹಿರಿಯ ನಾಗರಿಕರ ದೌರ್ಜನ್ಯ ತಡೆ ದಿನದ ಅಂಗವಾಗಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಹಿರಿಯ ನಾಗರಿಕರು ಹಾಗೂ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಸೋಮವಾರ ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು.

ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸಿದ ಹಿರಿಯ ನಾಗರಿಕರು, ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.

‘ಎಲ್ಲ ಹಿರಿಯ ನಾಗರಿಕರು ರಾಷ್ಟ್ರದ ಸಂಪತ್ತು ಎಂದು ಘೋಷಿಸಿ, ರಾಜ್ಯ, ಕೇಂದ್ರ ಸರ್ಕಾರಗಳು ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು. ಆರ್ಥಿಕವಾಗಿ ದುರ್ಬಲರಾದ ಹಿರಿಯ ನಾಗರಿಕರಿಗೆ ತಿಂಗಳಿಗೆ ₹10 ಸಾವಿರ ವೃದ್ಧಾಪ್ಯ ವೇತನ ನೀಡಬೇಕು. ಹಿರಿಯ ನಾಗರಿಕರ ಕಾನೂನು-2007 ಅನ್ನು ಕಡ್ಡಾಯವಾಗಿ ಅನುಷ್ಠಾನ ಮಾಡಬೇಕು’ ಒತ್ತಾಯಿಸಿದರು.

‘ರೈಲ್ವೆ ಪ್ರಯಾಣ ದರದಲ್ಲಿನ ರಿಯಾಯಿತಿ ತಕ್ಷಣ ಪುನರಾಂಭಿಸಬೇಕು. ಪೊಲೀಸ್ ಠಾಣೆಗಳಲ್ಲಿ ಹಿರಿಯ ನಾಗರಿಕರ ಸಮಿತಿ ರಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು’ ಎಂದರು.

ರಾಜ್ಯ ಘಟಕದ ಅಧ್ಯಕ್ಷ ಬಿ.ಎ. ಪಾಟೀಲ, ಧರಣೇಂದ್ರ ಜವಳಿ, ಲಿಂಗರಾಜ ಅಂಗಡಿ, ಆರ್.ಕೆ. ಮಠದ ಸೇರಿದಂತೆ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.