ರಾಜ್ಯ ಸರ್ಕಾರದ ವಿರುದ್ಧವೂ ಆಕ್ರೋಶ
‘ನೂತನ ಕಾರ್ಮಿಕ ಸಂಹಿತೆಗಳನ್ನು ರಾಜ್ಯದಲ್ಲಿ ಜಾರಿ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಕೂಡಲೇ ಘೋಷಣೆ ಮಾಡಬೇಕು. ಕೆಲಸದ ಅವಧಿಯನ್ನು 10 ತಾಸು ಮಾಡಿದ್ದು ಅದನ್ನು ಸಹ ವಾಪಸ್ ಪಡೆದು ಎಂಟು ಗಂಟೆಗೆ ಇಳಿಸಬೇಕು’ ಎಂದು ಕಾರ್ಮಿಕ ಮುಖಂಡ ಗಂಗಾಧರ ಬಡಿಗೇರ ಆಗ್ರಹಿಸಿದರು. ‘ಕನಿಷ್ಠ ವೇತನ ಪರಿಷ್ಕರಣೆಗೆ ಲಾಡ್ ಅವರು ಮುಂದಾಗಿದ್ದು ಇನ್ನೂ ಜಾರಿಗೆ ಬಂದಿಲ್ಲ. ಅಂಬೇಡ್ಕರ್ ಬಸವಣ್ಣನವರ ತತ್ವಗಳ ಬಗ್ಗೆ ಮಾತನಾಡುವ ಅವರು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿರುವ ಕಾರ್ಮಿಕ ಸಂಹಿತೆ ವಿರುದ್ಧ ದನಿ ಎತ್ತುತ್ತಿಲ್ಲ. ಈ ನಡುವೆ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಮೇಲೆ ಒತ್ತಡ ಹೇರುತ್ತ ಸಂಹಿತೆ ಅನುಷ್ಠಾನಗೊಳಿಸಲು ಯತ್ನಿಸುತ್ತಿದೆ’ ಎಂದು ಆರೋಪಿಸಿದರು.