ಧಾರವಾಡ: ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಹಾಗೂ ಕೆಎಸ್ಆರ್ಟಿಸಿ ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾ ಮಹಾನಗರ ಹಾಗೂ ಗ್ರಾಮೀಣ ಘಟಕದವರು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡ ಪ್ರತಿಭಟನಾಕಾರರು ರಾಜ್ಯ ಸರ್ಕಾರ ಹಾಗೂ ಪ್ರಿಯಾಂಕ ಖರ್ಗೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು, ಪ್ರಯಾಣ ದರ ಏರಿಕೆ ಮಾಡಿದೆ. ಪ್ರಯಾಣ ದರ ಏರಿಕೆ ಮಾಡಿರುವುದನ್ನು ಕೂಡಲೇ ವಾಪಸ್ ಪಡೆಯಬೇಕು. ಬೀದರ್ನ ಗುತ್ತಿಗೆದಾರ ಸಚಿನ್ ಪಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಿಯಾಂಕ ಖರ್ಗೆ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಸರ್ಕಾರವು ಪೆಟ್ರೋಲ್, ಡಿಸೇಲ್, ಹಾಲು, ಅಬಕಾರಿ ಶುಲ್ಕ, ನೋಂದಣಿ ಶುಲ್ಕ, ಬಸ್ ಪ್ರಯಾಣ ದರ ಸಹಿತ ರೈತರಿಗೆ ಸಬ್ಸಿಡಿ ದರದಲ್ಲಿ ನೀಡುತ್ತಿದ್ದ ಬಿತ್ತನೆ ಬೀಜದ ದರವನ್ನೂ ಏರಿಸಿದೆ. ಈ ಕಾಂಗ್ರೆಸ್ ಸರ್ಕಾರವು ಶಾಸಕರಿಗೆ ಭದ್ರತೆ ಒದಗಿಸಲು ಸರ್ಕಾರ ವಿಫಲವಾಗಿದೆ. ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದರು

ಮಾಜಿ ಶಾಸಕಿ ಸೀಮಾ ಮಸೂತಿ ಮಾತನಾಡಿ, ಗುತ್ತಿಗೆದಾರ ಸಚಿನ್ ಅವರ ಆತ್ಮಹತ್ಯೆ ಪ್ರಕರಣವನ್ನು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಿ ಸಚಿನ್ ಅವರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

‘ರಾಜ್ಯ ಕಾಂಗ್ರೆಸ್ ಸರ್ಕಾರವು ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಿದೆ. ಈಗ ಟಿಕೆಟ್ ದರ ಏರಿಸಿದೆ. ಉಚಿತ ವಿದ್ಯುತ್ ನೀಡಿ ವಾಣಿಜ್ಯ ಉದ್ದೇಶಕ್ಕೆ ಬಳಸುವ ವಿದ್ಯುತ್ ದರ ಹೆಚ್ಚಿಸಿದೆ. ಜನಸಾಮಾನ್ಯರಿಗೆ ಉಚಿತ ಯೋಜನೆ ಕೊಡುವ ನೆಪದಲ್ಲಿ ಬೇರೊಂದು ರೂಪದಲ್ಲಿ ಹಣ ಸಂಗ್ರಹಿಸುತ್ತಿದೆ’ ಎಂದು ದೂರಿದರು.

ಪಾಲಿಕೆ ಸದಸ್ಯರಾದ ಈರೇಶ ಅಚಟಗೇರಿ, ಸುರೇಶ ಬೆದರೆ, ಬಿಜೆಪಿ ಮುಖಂಡರಾದ ವಿಜಯ ಶೆಟ್ಟಿ, ಬಸವರಾಜ ಕುಂದಸಂಜಯ್ ಕಪಟಕರ್, ದತ್ತಮೂರ್ತಿ ಕುಲಕರ್ಣಿ, ಮೋಹನ ರಾಮದುರ್ಗ, ಕೃಷ್ಣಾ ಗಂಡಗಾಳಕರ, ಪ್ರಭು ನವಲಗುಂದ ಮಠ, ಸುನಿಲ್ ಮೂರೆ, ಅಮಿತ್ ಪಾಟೀಲ, ವೀರಯ್ಯ ಚಿಕ್ಕಮಠ, ಶಿವಾಜಿ ಶಿಂಧೆ, ನಿಂಗನಗೌಡ ಪಾಟೀಲ, ಸುನೀತಾ ಮಾಳಕರ್, ಅಶ್ವಿನಿ ವೀರಾಪುರ, ಜ್ಯೋತಿ ಪಾಟೀಲ, ಮಾಲತಿ ಹುಲಿಕಟ್ಟಿ, ರಾಜೇಶ್ವರಿ ಅಳಗವಾಡಿ, ಪುಷ್ಪಾ ನವಲಗುಂದ ಪ್ರತಿಭಟನೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.