ಮರಾಠಾ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ಆ. 4ರಂದು ಪ್ರತಿಭಟನಾ ರ‍್ಯಾಲಿ

7

ಮರಾಠಾ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ಆ. 4ರಂದು ಪ್ರತಿಭಟನಾ ರ‍್ಯಾಲಿ

Published:
Updated:

ಧಾರವಾಡ: ‘ಮರಾಠಾ ವಿದ್ಯಾ ಪ್ರಸಾರಕ ಮಂಡಳಿ ವತಿಯಿಂದ ಮರಾಠಾ ಸಮುದಾಯವನ್ನು ಪ್ರವರ್ಗ ‘2ಎ’ಗೆ ಸೇರಿಸುವಂತೆ ಆಗ್ರಹಿಸಿ ಆ.4 ರಂದು ನಗರದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ’ ಎಂದು ಪಾಲಿಕೆ ವಿರೋಧ ಪಕ್ಷದ ನಾಯಕ ಸುಭಾಸ ಶಿಂಧೆ ಹೇಳಿದರು.

‘ಏಕ್ ಮರಾಠಾ ಲಾಕ್ ಮರಾಠಾ’ ಅಡಿ ಎರಡು ವರ್ಷಗಳಿಂದ ಎಲ್ಲ ಜಿಲ್ಲೆಗಳಲ್ಲಿ ಹೋರಾಟ ನಡೆಸಿದರೂ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ. ಅಂದು ಬೆಳಗ್ಗೆ 10.30ಕ್ಕೆ ನಗರದಲ್ಲಿನ ಶಿವಾಜಿ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಪಾದಯಾತ್ರೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಮನವಿಪತ್ರ ಸಲ್ಲಿಸಲಾಗುವುದು’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ನಮ್ಮ ಸಮಾಜದ ಜನಪ್ರತಿನಿಧಿಗಳ ಸಂಖ್ಯೆ ಕಡಿಮೆ ಇರುವುದು ಹಾಗೂ ಆಯ್ಕೆಯಾಗಿರುವ ನಾಯಕರು ಧ್ವನಿ ಎತ್ತದಿರುವುದೇ ಈ ಸ್ಥಿತಿಗೆ ಕಾರಣವಾಗಿದೆ. ನಮ್ಮ ಹೋರಾಟ ತೀವ್ರ ಸ್ವರೂಪ ಪಡೆಯುವ ಮುನ್ನವೇ ಸರ್ಕಾರ ಎಚ್ಚೆತ್ತುಕೊಂಡು, ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು’ ಎಂದರು.

ಭೀಮಪ್ಪ ಕಸಾಯಿ, ನಾರಾಯಣ ಹುಬ್ಬಳ್ಳಿ, ಚಂದ್ರು ಮೋರೆ, ಯಲ್ಲಪ್ಪ ಜಾನುಕನವರ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !