ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ವಿರುದ್ಧ ಪ್ರಚೋದನಕಾರಿ ಹೇಳಿಕೆ: ಕ್ಷಮೆಗೆ ಆಗ್ರಹ

Published 27 ಮಾರ್ಚ್ 2024, 14:39 IST
Last Updated 27 ಮಾರ್ಚ್ 2024, 14:39 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಪ್ರಧಾನಿ ನರೇಂದ್ರ ಮೋದಿ ಅವರು ಜಾಗತಿಕ ಮಟ್ಟದ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಅವರ ಬಗ್ಗೆ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಕ್ಷಮೆ ಕೇಳಬೇಕು’ ಎಂದು ಶಾಸಕ ಮಹೇಶ ಟೆಂಗಿನಕಾಯಿ ಆಗ್ರಹಿಸಿದರು. 

‘ರಾಜಕಾರಣದಲ್ಲಿ ಆರೋಪ, ಪ್ರತ್ಯಾರೋಪ ಸಹಜ. ಆದರೆ, ಮಾತನಾಡುವಾಗ ಎಚ್ಚರವಹಿಸಬೇಕು. ಬೇರೆಯವರ ಗೌರವಕ್ಕೆ ಧಕ್ಕೆಯಾಗದ ರೀತಿಯಲ್ಲಿ ವರ್ತಿಸಬೇಕು. ಮಾತಿನ ವೇಗದಲ್ಲಿ ‘ಮೋದಿ ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡಿಯಿರಿ’ ಎಂದು ತಪ್ಪಾಗಿ ಮಾತನಾಡಿರುವ ತಂಗಡಗಿಯವರು ಕೂಡಲೇ ಕ್ಷಮೆ ಕೇಳಿ, ಮುಂದಿನ ದಿನಗಳಲ್ಲಿ ಉತ್ತಮ ನಡಾವಳಿಕೆಯೊಂದಿಗೆ ರಾಜಕಾರಣ ಮಾಡಬೇಕು’ ಎಂದು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದರು. 

‘ಕೋಲಾರ ಮೀಸಲು ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರ ಕಾಂಗ್ರೆಸ್‌ನ ಆಂತರಿಕ ವಿಷಯ. ಕಾಂಗ್ರೆಸ್– ಬಿಜೆಪಿಯಲ್ಲಿ ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆಯಲ್ಲಿ ಭಿನ್ನಾಭಿಪ್ರಾಯ, ಅಸಮಾಧಾನ ಉಂಟಾಗುವುದು ಸಹಜ. ಕ್ರಮೇಣ ಎಲ್ಲವೂ ಸರಿಯಾಗಲಿದೆ’ ಎಂದರು. 

‘ಕಾಂಗ್ರೆಸ್‌ನಲ್ಲಿಯೇ ಎರಡು ಬಣಗಳು ಸೃಷ್ಟಿಯಾಗಿವೆ. ಲೋಕಸಭಾ ಚುನಾವಣೆಯ ನಂತರ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಬಹುದೊಡ್ಡ ಅಘಾತ ಎದುರಿಸಲಿದೆ ಎಂದ ಅವರು, ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲುತ್ತಾರೆ’ ಎಂದು ವಿಶ್ವಾಸವನ್ನೂ ವ್ಯಕ್ತಪಡಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT