ಸೋಮವಾರ, ಜನವರಿ 20, 2020
29 °C

ಪಿಎಸ್‌ಐ ನೇಮಕಾತಿ ಪರೀಕ್ಷೆ ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಪಿಎಸ್‌ಐ ಸಿವಿಲ್‌(ಪುರುಷ ಮತ್ತು ಮಹಿಳಾ) ಹುದ್ದೆಗಳ ನೇಮಕಾತಿಗೆ ನಡೆಯಬೇಕಾಗಿದ್ದ ಸಹಿಷ್ಣುತೆ ಮತ್ತು ದೇಹದಾರ್ಢ್ಯ ಪರೀಕ್ಷೆಯನ್ನು ಮುಂದೂಡಲಾಗಿದೆ.

ಡಿಸೆಂಬರ್‌ 20 ರಿಂದ ಜನವರಿ 10ರ ವರೆಗೆ ಧಾರವಾಡದ ಡಿಎಆರ್‌ ಹೆಡ್‌ ಕ್ವಾಟರ್ಸ್‌ ಮೈದಾನದಲ್ಲಿ ಪಿಎಸ್‌ಐ ಸಿವಿಲ್‌ (ಪುರುಷ ಮತ್ತು ಮಹಿಳಾ) ಹುದ್ದೆಗಳಿಗೆ ಪರೀಕ್ಷೆ ನಡೆಸಲು ಈ ಮೊದಲು ದಿನಾಂಕ ನಿಗದಿ ಪಡಿಸಲಾಗಿತ್ತು. ಆದರೆ, ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಯುತ್ತಿರುವುದರಿಂದ ಪರೀಕ್ಷೆಯನ್ನು ಡಿ.26ರಿಂದ ಜನವರಿ 17ರ ವರೆಗೆ ನಡೆಸಲಾಗುವುದು ಎಂದು ಹುಬ್ಬಳ್ಳಿ–ಧಾರವಾಡ ಪೊಲೀಸ್‌ ಕಮಿಷನರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು