ಮಂಗಳವಾರ, ಏಪ್ರಿಲ್ 20, 2021
27 °C

ಪಂಡಿತ್ ಹಾಸಣಗಿಗೆ ರಾಜಗುರು ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಧಾರವಾಡ: ಹಿರಿಯ ಹಿಂದೂಸ್ತಾನಿ ಗಾಯಕ ಪಂಡಿತ್ ಗಣಪತಿ ಭಟ್ ಹಾಸಣಗಿ ಅವರಿಗೆ ಪಂಡಿತ್ ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ನೀಡುವ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.

ಪ್ರಶಸ್ತಿಯು ₹1ಲಕ್ಷ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಧಾರವಾಡದ ಸಿತಾರ್ ವಾದಕ ಉಸ್ತಾದ್ ಹಫೀಜ್ ಬಾಲೇಖಾನ್ ಮತ್ತು ಹಿಂದೂಸ್ತಾನಿ ಹಾಗೂ ಕರ್ನಾಟಕ ಸಂಗೀತ ಗಾಯಕಿ ಮೈಸೂರಿನ ವಿದುಷಿ ಲಕ್ಷ್ಮೀ ನಾಗರಾಜ ಅವರಿಗೆ ಯುವ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಯು ತಲಾ ₹25 ಸಾವಿರ ನಗರದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.

ಪ್ರಶಸ್ತಿ ಪ್ರದಾನ ಸಮಾರಂಭವು ಮಾರ್ಚ್‌ 13ರಂದು ನಗರದ ಸೃಜನಾ ರಂಗಮಂದಿರದಲ್ಲಿ ಜರುಗಲಿದೆ. ಜತೆಗೆ ಪ್ರಶಸ್ತಿ ಪುರಸ್ಕೃತರ ಸಂಗೀತ ಕಛೇರಿ ಜರುಗಲಿದೆ ಎಂದು ಟ್ರಸ್ಟ್ ಪ್ರಕಟಣೆ ತಿಳಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು