‘ಸಾಹಿತ್ಯ ನಡಿಗೆ’ ಆಯೋಜನೆಗೆ ಸಲಹೆ
‘ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿನ ರಸ್ತೆಗಳಿಗೆ ಸಾಹಿತಿಗಳು ಸಾಧಕರ ಹೆಸರಿಡಲು ಹಾಗೂ ಸಾಹಿತ್ಯ ನಡಿಗೆ ಕಾರ್ಯಕ್ರಮ (ಧಾರವಾಡದಲ್ಲಿನ ಸಾಹಿತಿಗಳ ತಾಣ ವೀಕ್ಷಣೆ) ಕಾರ್ಯಕ್ರಮ ಆಯೋಜಿಸಲು ಸಲಹೆ ನೀಡಲಾಗಿದೆ’ ಎಂದು ಪ್ರೊ. ಪುರುಷೋತ್ತಮ ಬಿಳಿಮಲೆ ತಿಳಿಸಿದರು. ‘ಕನ್ನಡದ ಹೋರಾಟದಲ್ಲಿ ಕನ್ನಡ ಸಂಘಟನೆಗಳ ಪದಾಧಿಕಾರಿಗಳ ವಿರುದ್ಧ ದಾಖಲಾಗಿರುವ ಪ್ರಕರಣಗಳ ಪಟ್ಟಿಯನ್ನು ಪ್ರಾಧಿಕಾರಕ್ಕೆ ಕಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಇಂಥ ಪ್ರಕರಣಗಳನ್ನು ವಾಪಸ್ ಪಡೆಯುವುದಾಗಿ ಉಪಮುಖ್ಯಮಂತ್ರಿ ಹೇಳಿದ್ದರು. ಪಟ್ಟಿಯನ್ನು ಸರ್ಕಾರಕ್ಕೆ ಕಳಿಸಲಾಗುವುದು’ ಎಂದರು.