ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಧಾರವಾಡ | ನಾನು ಯಾವ ರೇಸ್‌ನಲ್ಲೂ ಇಲ್ಲ: ಆರ್‌.ವಿ.ದೇಶಪಾಂಡೆ

Published : 4 ಸೆಪ್ಟೆಂಬರ್ 2024, 15:42 IST
Last Updated : 4 ಸೆಪ್ಟೆಂಬರ್ 2024, 15:42 IST
ಫಾಲೋ ಮಾಡಿ
Comments

ಧಾರವಾಡ: ‘ನಾನು ಯಾವ ರೇಸ್‌ನಲ್ಲೂ ಇಲ್ಲ, ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿಯಾಗಿ ಇರುತ್ತಾರೆ. ಅವರ ಆಡಳಿತ ಮತ್ತು ನಾಯಕತ್ವ ಸಮರ್ಥವಾಗಿದ್ದು, ಯಾರಿಗೂ ಬೇಸರ ಮತ್ತು ಅಸಮಾಧಾನವಿಲ್ಲ’ ಎಂದು ಆಡಳಿತ ಸುಧಾರಣೆ ಆಯೋಗದ ಅಧ್ಯಕ್ಷ ಆರ್‌.ವಿ.ದೇಶಪಾಂಡೆ ತಿಳಿಸಿದರು.

‘ಮುಖ್ಯಮಂತ್ರಿ ಆಗಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ’ ಎಂದು ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹೇಳಿಕೆಗೆ ಬುಧವಾರ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು,‘ಆಸೆ ಮತ್ತು ದುರಾಸೆಯೇ ಬೇರೆ’ ಎಂದರು.

‘ದೆಹಲಿಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿರುವ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ರಾಜ್ಯಕ್ಕೆ ಅನುದಾನ ನೀ‌ಡುವಂತೆ ಮನವಿ ಮಾಡಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT