ಆರ್‌ಪಿಎಫ್‌ ಪರೀಕ್ಷೆ ಮುಂದಕ್ಕೆ

7

ಆರ್‌ಪಿಎಫ್‌ ಪರೀಕ್ಷೆ ಮುಂದಕ್ಕೆ

Published:
Updated:

ಹುಬ್ಬಳ್ಳಿ: ರೈಲ್ವೆ ರಕ್ಷಣಾ ದಳದ (ಆರ್‌ಪಿಎಫ್‌) ಇನ್‌ಸ್ಪೆಕ್ಟರ್ ಹುದ್ದೆಗೆ ಶನಿವಾರ ನಡೆಯಬೇಕಿದ್ದ ಪರೀಕ್ಷೆ
ಯನ್ನು ತಾಂತ್ರಿಕ ಕಾರಣದಿಂದ ಮುಂದೂಡಲಾಗಿದೆ. ಪರೀಕ್ಷಾ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ರೈಲ್ವೆ ಪರೀಕ್ಷಾ ವೀಕ್ಷಕ ಅಶೋಕಕುಮಾರ ‘ಪ್ರಜಾವಾಣಿ’ಗೆ ತಿಳಿಸಿದರು

ಪರೀಕ್ಷೆ ಬರೆಯಲು ಬಂದಿದ್ದ 550ಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆ ಮುಂದೂಡಿದ ನಿರ್ಧಾರ ವಿರೋಧಿಸಿ ಪ್ರತಿಭಟನೆ ಮಾಡಿದರು.

ಬೆಳಿಗ್ಗೆ 8 ಗಂಟೆಗೆ ಪರೀಕ್ಷೆ ಆರಂಭವಾಗಬೇಕಿತ್ತು. ಆದರೆ, 11 ಗಂಟೆಯಾದರೂ ಪರೀಕ್ಷಾ ಕೇಂದ್ರದ ಬಾಗಿಲು ತೆರೆಯಲಿಲ್ಲ. ಇದರಿಂದ ಪರೀಕ್ಷಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದರು. ಬಳಿಕ ಸರ್ವರ್‌ ಸಮಸ್ಯೆ ಇರುವುದಾಗಿ ಅಧಿಕಾರಿಗಳು ತಿಳಿಸಿದರು.

ಪರೀಕ್ಷೆ ರದ್ದು ಮಾಡಿರುವುದರಿಂದ ಪ್ರಯಾಣ ವೆಚ್ಚವನ್ನು ರೈಲ್ವೆಯೇ ಭರಿಸಬೇಕು ಎಂದು ಆಗ್ರಹಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !