‘ಎಐ ಆಧಾರಿತ ಸಿ.ಸಿ ಟಿ.ವಿ ಕ್ಯಾಮೆರಾ’
ವಿಭಾಗೀಯ ರೈಲ್ವೆ ಸುರಕ್ಷತಾ ಪಡೆಯ (ಆರ್‌ಪಿಎಫ್) ನಿರ್ವಹಣೆ ಮತ್ತು ನಿಯಂತ್ರಣ ಕೇಂದ್ರದಲ್ಲಿ ಅಳವಡಿಸಲಾದ ಸಿ.ಸಿ ಟಿ.ವಿ ಕಮಾಂಡ್ ಕಂಟ್ರೋಲ್ (ಡಿಜಿಟಲ್ ಸಿ.ಸಿ ಟಿ.ವಿ ಕ್ಯಾಮೆರಾ ಕಣ್ಗಾವಲು ಪ್ಯಾನಲ್ ) ಆತ್ಯಾಧುನಿಕ ವ್ಯವಸ್ಥೆಯಾಗಿದೆ. ಇದು ವಿಭಾಗೀಯ ರೈಲ್ವೆ ವ್ಯಾಪ್ತಿಯಲ್ಲಿನ 79 ರೈಲು ನಿಲ್ದಾಣಗಳು ಸೇರಿದಂತೆ ಪ್ರಮುಖ ಸ್ಥಳಗಳ ಕಣ್ಗಾವಲು ಮಾಡುತ್ತದೆ. ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಒಳಗೊಂಡ 943 ಸಿಸಿ ಟಿ.ವಿ ಕ್ಯಾಮೆರಾಗಳು ಅಲ್ಲಿನ ದೃಶ್ಯಗಳನ್ನು ಸೆರೆಹಿಡಿಯುತ್ತವೆ. ಈ ಪ್ಯಾನಲ್‌ಗಳನ್ನು ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಸಂಯೋಜನೆಯಲ್ಲಿ ಅಳವಡಿಸಲಾಗಿದೆ.