ಧಾರವಾಡ: ಎರಡು ದಿನ ಮುಂದುವರಿಯಲಿದೆ ಮಳೆ

ಧಾರವಾಡ: ಜಿಲ್ಲೆಯ ಕೆಲವೆಡೆ ಮಂಗಳವಾರ ಮಧ್ಯಾಹ್ನದಿಂದ ಸಾಧಾರಣ ಮಳೆ ಸುರಿಯಿತು. ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಕೃಷಿ ವಿಶ್ವವಿದ್ಯಾಲಯದ ಹವಾಮಾನ ವಿಭಾಗ ತಿಳಿಸಿದೆ.
ಜಿಲ್ಲೆಯಾದ್ಯಂತ ಮಂಗಳವಾರ ಮೋಡ ಕವಿದ ವಾತಾವರಣವಿತ್ತು. ಧಾರವಾಡ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮಧ್ಯಾಹ್ನದಿಂದ ನಿರಂತರವಾಗಿ ಸಾಧಾರಣ ಮಳೆ ಸುರಿಯಿತು. ಹೀಗಾಗಿ ಮುಂಗಾರು ಆರಂಭಕ್ಕೂ ಮೊದಲೇ ಮಳೆಗಾಲದ ವಾತಾವರಣ ನಿರ್ಮಾಣವಾಗಿದೆ.
ಅಳ್ನಾವರ ಹಾಗೂ ಕಲಘಟಗಿ ಭಾಗಗಳಲ್ಲಿ ಕೆಲ ನಿಮಿಷ ಮಳೆ ಸುರಿದಿದೆ. ನವಲಗುಂದ, ಅಣ್ಣಿಗೇರಿ ಹಾಗೂ ಕುಂದಗೋಳ ಭಾಗದಲ್ಲಿ ಮೋಡ ಕವಿದ ವಾತಾವರಣ ಇತ್ತು.
‘ನೈರುತ್ಯ ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಉಂಟಾಗಿದ್ದು, ಅದು ಉತ್ತರದ ಕಡೆ ಚಲಿಸುತ್ತಿದೆ. ಹೀಗಾಗಿ ಮುಂದಿನ 2ರಿಂದ 3 ದಿನಗಳ ಕಾಲ ಉತ್ತರ ಕರ್ನಾಟಕ ಭಾಗದಲ್ಲಿ ಮಿಂಚು, ಗುಡುಗು ಸಹಿತ ಚದುರಿದ ಮಳೆಯಾಗಲಿದೆ. ಬಿರುಸಿನ ಗಾಳಿ ಬೀಸಲಿದೆ’ ಎಂದು ಹವಾಮಾನ ವಿಭಾಗದ ಮುಖ್ಯಸ್ಥ ಡಾ. ಆರ್.ಎಚ್.ಪಾಟೀಲ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.