ಗುರುವಾರ , ಅಕ್ಟೋಬರ್ 22, 2020
21 °C
ಉತ್ತರ ಕರ್ನಾಟಕದ ಹಲವೆಡೆ ತಗ್ಗಿದ ಮಳೆ

ಮನೆ ಕುಸಿದು ಬಾಲಕಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ರಭಸ ತಗ್ಗಿದ್ದು, ಮಳೆಯ ಅವಾಂತರಗಳು ವರದಿಯಾಗಿವೆ. ಸತತ 2–3 ದಿನಗಳಿಂದ ಸುರಿದ ಮಳೆಯಿಂದಾಗಿ ಶನಿವಾರ ರಾತ್ರಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಡೊಂಕಮಡು ಗ್ರಾಮದಲ್ಲಿ ಮನೆಯೊಂದು ಕುಸಿದು ಬಿದ್ದು, ಬಾಲಕಿಯೊಬ್ಬಳು ಮೃತಪಟ್ಟಿದ್ದಾರೆ. ಮತ್ತೊಬ್ಬ ಬಾಲಕಿ ಗಾಯಗೊಂಡಿದ್ದಾರೆ.

ಗ್ರಾಮದ ಮರೆಮ್ಮ ಹುಲಗಪ್ಪ ಬಿಜ್ಜೂರ (11) ಮೃತಪಟ್ಟಿದ್ದು, ಇನ್ನೊಬ್ಬ ಬಾಲಕಿ ರೇಖಾ ಲೊಟಗೇರಿ ತೀವ್ರವಾಗಿ ಗಾಯಗೊಂಡಿದ್ದಾರೆ. ಜಿಲ್ಲೆಯಾದ್ಯಂತ ಎರಡು ದಿನಗಳಿಂದ ಸುರಿದ ಮಳೆಗೆ 303 ಭಾಗಶಃ ಮತ್ತು 3 ಮನೆಗಳು ಪೂರ್ಣ ಪ್ರಮಾಣದಲ್ಲಿ ಕುಸಿದು
ಬಿದ್ದಿವೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್‌ ತಿಳಿಸಿದ್ದಾರೆ.

ಹೊಸಪೇಟೆ ತಾಲ್ಲೂಕಿನ ಮರಿಯಮ್ಮನಹಳ್ಳಿಯಲ್ಲಿ ಎರಡು ಹಾಗೂ ಅಯ್ಯನಹಳ್ಳಿ ಗ್ರಾಮದಲ್ಲಿ ಒಂದು ಮನೆಗೆ ಹಾನಿಯಾಗಿದೆ. ತಾಲ್ಲೂಕಿನಾದ್ಯಂತ ಕಳೆದ ಮೂರು ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಗೆ ಅಂದಾಜು 107 ಮನೆಗಳು ಕುಸಿದಿವೆ. ತಾಲ್ಲೂಕಿನ ಜಕ್ಕೇರಾಳ ಗ್ರಾಮದಲ್ಲಿ ನಿಂಗಪ್ಪ ಇಂಗಳಗೇರಿ ಎನ್ನುವವರ ಮನೆ ಗೋಡೆ ಕುಸಿದು ಮನೆಯ ಪಕ್ಕದಲ್ಲಿ ಕಟ್ಟಿದ್ದ ಮೇಕೆಯೊಂದು ಮೃತಪಟ್ಟಿದೆ. 

ಬಳ್ಳಾರಿ, ಬೆಳಗಾವಿ, ಧಾರವಾಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು