ಗುರುವಾರ , ಸೆಪ್ಟೆಂಬರ್ 23, 2021
27 °C

ಧಾರವಾಡ | ಪುನರ್ವಸು ಮಳೆ ಅಬ್ಬರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರವಾಡ: ನಗರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಪುನರ್ವಸು ಮಳೆ ಅಬ್ಬರಿಸುತ್ತಿದೆ.

ಗುರುವಾರ ಬೆಳಿಗ್ಗೆಯಿಂದ ಏಕೋಪ್ರಕಾರ ಮಳೆ ಸುರಿಯುತ್ತಲೇ ಇದೆ. ಮಲೆನಾಡು ಪ್ರದೇಶಗಳಾದ ಕಲಘಟಗಿ, ಅಳನಾವರ ಭಾಗದಲ್ಲೂ ಉತ್ತಮ ಮಳೆ ಸುರಿಯುತ್ತಿದೆ. ಕುಂದಗೋಳ, ನವಲಗುಂದ ಹಾಗೂ ಅಣ್ಣಿಗೇರಿಯಲ್ಲಿ ಸಾಧಾರಣವಾಗಿ ಮಳೆಯಾಗುತ್ತಿರುವ ವರದಿಯಾಗಿದೆ. 

ಗುರುವಾರ ಬೆಳಿಗ್ಗೆ ಕೊನೆಗೊಂಡಂತೆ ಕಲಘಟಗಿಯಲ್ಲಿ 12.2 ಸೆಂ. ಮೀ., ಧಾರವಾಡ 5, ಹುಬ್ಬಳ್ಳಿ 4, ಕುಂದಗೋಳ 6 ಹಾಗೂ ನವಲಗುಂದ 1 ಸೆಂ. ಮೀ. ಮಳೆ ಸುರಿದಿದೆ.

ನಗರ ಪ್ರದೇಶದಲ್ಲಿ ಚರಂಡಿ ಹಾಗೂ ರಸ್ತೆಯಲ್ಲಿ ಮಳೆ ನೀರು ಹರಿಯುತ್ತಿದೆ. ಗ್ರಾಮೀಣ ಭಾಗಗಳ ಕೆರೆಗಳಲ್ಲಿ ನೀರಿನ ಮಟ್ಟ ನಿಧಾನವಾಗಿ ಏರುತ್ತಿದೆ. ಜಿಲ್ಲೆಯಾದ್ಯಂತ ಕೃಷಿ ಚಟುವಟಿಕೆಗಳು ಗರಿಗೆದರಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು