ಶನಿವಾರ, ಮೇ 21, 2022
25 °C
ಮುಂಡಗೋಡ, ಹುಬ್ಬಳ್ಳಿಯಲ್ಲಿ ಗುಡುಗು ಸಹಿತ ಮಳೆ

ಶಿಗ್ಗಾವಿ: ಭಾರಿ ಮಳೆ, ಸಿಡಿಲು ಬಡಿದು ವಿದ್ಯಾರ್ಥಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ, ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ, ಬೆಳಗಾವಿ ಸೇರಿದಂತೆ ವಿವಿಧೆಡೆ ಗುರುವಾರ ಸಾಯಂಕಾಲ ಗುಡುಗು, ಸಿಡಿಲಿನೊಂದಿಗೆ ಕೆಲ ಸಮಯ ಧಾರಾಕಾರ ಮಳೆಯಾಗಿದ್ದು, ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕು ಚಂದಾಪುರದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮಾಲತೇಶ ಜೆಟ್ಟೆಪ್ಪನವರ (16) ಹೊಲಕ್ಕೆ ಹೋದಾಗ ಸಿಡಿಲು ಬಡಿದು ಮೃತ ಪಟ್ಟಿದ್ದಾನೆ. 

ಹಾವೇರಿ ಜಿಲ್ಲೆ ಸವಣೂರಿನಲ್ಲಿ ಗಾಳಿ–ಮಳೆಗೆ ತಾಲ್ಲೂಕಿನ ಮಂತ್ರೋಡಿ ಗ್ರಾಮದಲ್ಲಿ ಸುಮಾರು 70ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, 50ಕ್ಕೂ ಹೆಚ್ಚು ಮರಗಳು ಉರುಳಿಬಿದ್ದಿವೆ. ಈ ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣ ಹಾಗೂ ತಾಲ್ಲೂಕಿನ ಕೆಲವು ಗ್ರಾಮೀಣ ಭಾಗಗಳಲ್ಲಿ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಬಿರುಸಿನ ಮಳೆಯಾಗಿದೆ. ಕೆಲವೆಡೆ ಆಲಿಕಲ್ಲು ಸಹಿತ ಮಳೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು