ಧಾರವಾಡ: ‘ನಗರದ ಜಾನಪದ ಸಂಶೋಧನಾ ಕೇಂದ್ರ ನೀಡುವ ‘ಗಾನ-ಗಾರುಡಿಗ ಬಸವಲಿಂಗಯ್ಯ ಹಿರೇಮಠ’ ರಾಜ್ಯ ಪ್ರಶಸ್ತಿಗೆ ಬೆಳಗಾವಿ ಜಿಲ್ಲೆಯ ಬೈಲೂರಿನ ತತ್ವಪದ ಕಲಾವಿದ ರಾಮಪ್ಪ ಹಂಚಿನಮನಿ ಆಯ್ಕೆಯಾಗಿದ್ದಾರೆ’ ಎಂದು ಕೇಂದ್ರದ ಸಂಸ್ಥಾಪಕಿ ವಿಶ್ವೇಶ್ವರಿ ಹಿರೇಮಠ ತಿಳಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಪುರಸ್ಕಾರವು ₹10 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ. ಆಲೂರು ವೆಂಕಟರಾವ್ ಸಭಾಭವನದಲ್ಲಿ ಸೆಪ್ಟೆಂಬರ್ 1ರಂದು ಸಂಜೆ 5 ಗಂಟೆಗೆ ನಡೆಯುವ ಗುರಮ್ಮ ಹಾಗೂ ವೀರಪ್ಪ ಚಿನಗುಡಿ ದತ್ತಿ ಹಾಗೂ ಜನಪದ ಗಾಯಕ ಬಸವಲಿಂಗಯ್ಯ ಹಿರೇಮಠ ಅವರ 66ನೇ ಜನ್ಮದಿನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದರು.

‘ಮುರುಗೋಡದ ನೀಲಕಂಠ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಎನ್.ಎ. ಚರಂತಿಮಠ ಪ್ರಶಸ್ತಿ ಪ್ರದಾನ ಮಾಡುವರು. ಸಾಹಿತಿ ಬಿ.ಆರ್. ಪೊಲೀಸಪಾಟೀಲ ಅಭಿನಂದನಾ ಭಾಷಣ ಮಾಡುವರು. ಬೈಲೂರಿನ ಗಾನ ಗಾರುಡಿಗ ಬಸವಲಿಂಗಯ್ಯ ಹಿರೇಮಠ ಪ್ರತಿಷ್ಠಾನದ ಅಧ್ಯಕ್ಷ ಎನ್.ಎಸ್. ಗಲಗಲಿ ಅಧ್ಯಕ್ಷತೆ ವಹಿಸುವರು’ ಎಂದು ಹೇಳಿದರು.

ಕೇಂದ್ರದ ಅಧ್ಯಕ್ಷ ಗು.ರು. ಕಲ್ಮಠ, ಆಶಾ ಸೈಯದ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.