ಬುಧವಾರ, ಡಿಸೆಂಬರ್ 1, 2021
20 °C

ರಾಮಚಂದ್ರಾಪುರ ಶ್ರೀ ವಿರುದ್ಧದ ಸಿ.ಡಿ ಪ್ರಕರಣ: ಅರ್ಜಿ ವಜಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರವಾಡ: ರಾಮಚಂದ್ರಾಪುರ ಮಠದ ಘನತೆಗೆ ಚ್ಯುತಿ ಉಂಟು ಮಾಡುವಂಥ ಸಿ.ಡಿ ತಯಾರಿಕೆಗೆ ಸಂಬಂಧಿಸಿದ ಪ್ರಕರಣದಿಂದ ಹೆಸರು ಕೈ ಬಿಡುವಂತೆ ಕೋರಿ ಆರೋಪಿ ವಿಶ್ವನಾಥ ಫಣಿರಾಜ ಗೋಪಿ ಸಲ್ಲಿಸಿದ್ದ ಅರ್ಜಿಯನ್ನು ಇಲ್ಲಿನ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ವಿಡಿಯೊ ಕಾನ್ಫರೆನ್ಸ್‌ ಮೂಲಕ ಆದೇಶ ಪ್ರಕಟಿಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರಿದ್ದ ಪೀಠ,  ಸಾಕ್ಷಿಗಳ ಹೇಳಿಕೆ ದಾಖಲೆ ಆರಂಭಗೊಂಡ ದಿನದಿಂದ ಒಂದು ವರ್ಷದ ಅವಧಿಯಲ್ಲಿ ಪ್ರಕರಣವನ್ನು ಇತ್ಯರ್ಥಗೊಳಿಸಬೇಕು ಎಂದು ನಿರ್ದೇಶನ ನೀಡಿತು.

ಸ್ವಾಮೀಜಿಯವರನ್ನು ಹೋಲುವ ವ್ಯಕ್ತಿಯನ್ನಿರಿಸಿಕೊಂಡು, ತಂತ್ರಜ್ಞಾನ ಬಳಸಿ ಸಿಡಿ ತಯಾರಿಸಿ  ಅಪಪ್ರಚಾರ ಮಾಡಲಾಗುತ್ತಿದೆ ಎಂದು 2010ರಲ್ಲಿ ಶ್ರೀಮಠ ದೂರು ಸಲ್ಲಿಸಿತ್ತು. ಇದನ್ನು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿತ್ತು.

ಕುಮಟಾ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಈ ಮೊದಲು ಆರೋಪಿ ಮನವಿಯನ್ನು ಅಲ್ಲಿನ ನ್ಯಾಯಾಲಯ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮನವಿ ಸಲ್ಲಿಸಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು