ಹುಬ್ಬಳ್ಳಿ: 'ನಟಿ ರನ್ಯಾ ರಾವ್ ಪ್ರಕರಣವನ್ನು ಜಾರಿ ನಿರ್ದೇಶನಾಲಯ ಮತ್ತು ಇತರ ಸಂಸ್ಥೆಗಳು ಸಮಗ್ರವಾಗಿ ತನಿಖೆ ನಡೆಸುತ್ತಿವೆ. ಇದರಲ್ಲಿ ಯಾರೇ ಭಾಗಿಯಾಗಿದ್ದರೂ ಸೂಕ್ತ ಕ್ರಮವಾಗಲಿದೆ' ಎಂದು ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಹೇಳಿದರು.

ಭಾನುವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಸದ್ಯ ಪ್ರಕರಣ ತನಿಖಾ ಹಂತದಲ್ಲಿದೆ. ನಿಷ್ಪಕ್ಷಪಾತವಾಗಿ ತನಿಖೆ ನಡೆಯಲಿದೆ. ಯಾವುದೇ ಪಕ್ಷದವರಿರಲಿ, ರಕ್ಷಣೆಗೆ ಯಾರೂ ಮುಂದಾಗಬಾರದು. ನಮ್ಮ ಪಕ್ಷದ ಯಾವ ಸಚಿವರು ಸಹ ಅವರಿಗೆ ಬೆಂಬಲ ನೀಡಿಲ್ಲ. ಹಾಗೇನಾದರೂ ದಾಖಲೆಗಳಿದ್ದರೆ ಬಿಜೆಪಿ ಬಿಡುಗಡೆ ಮಾಡಲಿ. ತಪ್ಪಿತಸ್ಥರು ಯಾರೇ ಆಗುದ್ದರೂ ಶಿಕ್ಷೆಯಾಗಲೇಬೇಕು' ಎಂದರು.

'ಬಿಜೆಪಿ ಶಾಸಕರಾದ ಎಸ್.ಟಿ. ಸೋಮಶೇಖರ ಮತ್ತು ಶಿವರಾಮ ಹೆಬ್ಬಾರ ಅವರನ್ನು ಪಕ್ಷದಿಂದ ಉಚ್ಛಾಟಿಸುವ ಮಾಹಿತಿಯಿದೆ. ಈಗಾಗಲೇ ಅವರಿಬ್ಬರು ನಮ್ಮ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ. ಬಜೆಟ್ ಅನ್ನು ಸಹ ಸ್ವಾಗತಿಸಿದ್ದಾರೆ. ಅವರು ಯಾವಾಗ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗುತ್ತಾರೆ ಎಂದು ನೋಡಬೇಕಿದೆ. ಜೊತೆಗೆ ಮತ್ತೆ ಕೆಲವು ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆ ಸೇರಲು ಉತ್ಸುಕತೆಯಲ್ಲಿದ್ದಾರೆ. ಸೂಕ್ತ ಸಮಯದಲ್ಲಿ ವರಿಷ್ಠರು ತೀರ್ಮಾನ ಕೈಗೊಳ್ಳಲಿದ್ದಾರೆ' ಎಂದು ಹೇಳಿದರು.

'ರಾಜ್ಯ ಸಂಪುಟ ವಿಸ್ತರಣೆ ಮೇ ತಿಂಗಳಲ್ಲಿ ಆಗುವ ಸಾಧ್ಯತೆಯಿದೆ. ಹಿಂದಿನ ಸಚಿವ ಸಂಪುಟದಲ್ಲಿಯೇ ನನಗೆ ಸಚಿವ ಸ್ಥಾನ ಸಿಗಬೇಕಿತ್ತು. ಈ ಬಾರಿ ಸಿಗುವ ವಿಶ್ವಾಸವಿದೆ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.