ಹುಬ್ಬಳ್ಳಿ: ಮೂರು ವರ್ಷದ ಮಗುವಿನ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಗರದ ಘಂಟಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ನಡೆದಿದೆ.

30 ವರ್ಷದ ವ್ಯಕ್ತಿ ಕುಡಿದ ಮತ್ತಿನಲ್ಲಿ ಮನೆಯ ಸಮೀಪದಲ್ಲೇ ವಾಸವಾಗಿರುವ ಪರಿಚಯದವರ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದಲ್ಲದೇ ಮಗುವಿನ ಕಾಲಿಗೆ ಕಚ್ಚಿ ಗಾಯಗೊಳಿಸಿ ವಿಕೃತಿ ಮೆರೆದಿದ್ದಾನೆ.

ಆ ವ್ಯಕ್ತಿ ಬಾಲಕಿಯ ಮನೆಗೆ ಅಗಾಗ ಹೋಗುತ್ತಿದ್ದ. ಅದರಂತೆ ಗುರುವಾರ ಮಧ್ಯಾಹ್ನ ಹೋಗಿ ಆಟವಾಡುತ್ತಿದ್ದ ಮಗುವನ್ನು ಕರೆದುಕೊಂಡು ಬಂದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಮಗು ಜೋರಾಗಿ ಅಳಲು ಶುರುಮಾಡಿದಾಗ ಓಡಿಹೋಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಘಟನೆ ನಡೆದಿರುವುದನ್ನು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ನ ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಸಾಹಿಲ್ ಬಾಗ್ಲಾ ಖಚಿತಪಡಿಸಿದ್ದಾರೆ.

ಈ ಕುರಿತು ಘಂಟಿಕೇರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ. ಪ್ರಕರಣ ದಾಖಲಾಗಿದ್ದು, ಆರೋಪಿ ಯನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ ಮೂರು ತಿಂಗಳ ಹಿಂದೆ ಮದುವೆಯಾಗಿದ್ದ. ಆರೋಪಿ ಕುರಿತು ಇನ್ನಷ್ಟು ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.